ಚಿತ್ರದುರ್ಗಮಾರ್ಚ್21:
ಭಾರತೀಯ ಸ್ಟೇಟ್ ಬ್ಯಾಂಕ್, ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ (ಅಲಿಂಕೋ), ಜಿಲ್ಲಾಡಳಿತ ವತಿಯಿಂದ ಇದೇ ಮಾರ್ಚ್ 24ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ “ದಿವ್ಯಾಂಗ ವ್ಯಕ್ತಿಗಳಿಗೆ ಉಚಿತ ಸಾಧನ ಮತ್ತು ಸಲಕರಣೆಗಳ ವಿತರಣೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಸಾಧನ ಸಲಕರಣೆಗಳ ವಿತರಣೆ ಮಾಡುವರು. ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತ ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಭಾಗವಹಿಸುವರು.
ಕೇಂದ್ರ ಸರ್ಕಾರದ ಅಡಿಪ್ ಯೋಜನೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಿ.ಎಸ್.ಆರ್ (ಸಾಮಾಜಿಕ ಹೊಣೆಗಾರಿಕೆ ಕಾರ್ಯನಿಧಿ) ಅನುದಾನದಡಿ ಜಿಲ್ಲೆಯಲ್ಲಿನ 512 ವಿಕಲಚೇತನ ಫಲಾನುಭವಿಗಳಿಗೆ ಉಚಿತ ಸಾಧನ-ಸಲಕರಣೆಗಳನ್ನು ವಿತರಿಸಲು ಗುರುತಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.