ಚಿತ್ರದುರ್ಗ.ಜ.16:
ಚಿತ್ರದುರ್ಗ ಜಿಲ್ಲಾ ಕೃಷಿಕ ಸಮಾಜಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾಗಿ ಎನ್.ಆರ್.ಮಹೇಶ್ವರಪ್ಪ, ಉಪಾಧ್ಯಕ್ಷರಾಗಿ ಎಸ್.ಧರಣೇಶ್, ಪ್ರಧಾನ ಕಾರ್ಯದರ್ಶಿಯಾಗಿ ರಾಗಿ ಶಿವಮೂರ್ತಪ್ಪ, ಖಜಾಂಚಿಯಾಗಿ ಸಿ.ಭಕ್ತಪ್ರಹ್ಲಾದ್, ರಾಜ್ಯಪ್ರತಿನಿಧಿಯಾಗಿ ವಿ.ಜಿ.ಪರಮೇಶ್ವರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025-26 ರಿಂದ 2029-30ನೇ ಸಾಲಿನ ಐದು ವರ್ಷಗಳ ಅವಧಿಗೆ ಚಿತ್ರದುರ್ಗ ಜಿಲ್ಲಾ ಕೃಷಿಕ ಸಮಾಜದ ಪದಾಧಿಕಾರಿಗಳ ಚುನಾವಣೆಯನ್ನು ಬುಧವಾರ ಜಿಲ್ಲಾ ಕೃಷಿಕ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಚಿತ್ರದುರ್ಗ ನಗರದ ಜಂಟಿ ಕೃಷಿ ನಿರ್ದೇಶಕ ಕಚೇರಿಯಲ್ಲಿ ಏರ್ಪಡಿಸಲಾಯಿತು. ಸಭೆಯಲ್ಲಿ ಹಂಗಾಮಿ ಅಧ್ಯಕ್ಷರಾಗಿ ರಮೇಶಪ್ಪ ಹೊಳಲ್ಕೆರೆ ಅವರು ಅಧ್ಯಕ್ಷತೆ ವಹಿಸಿದ್ದರು ಎಂದು ಜಿಲ್ಲಾ ಕೃಷಿಕ ಸಮಾಜದ ಪದನಿಮಿತ್ತ ಕಾರ್ಯದರ್ಶಿ ಹಾಗೂ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ತಿಳಿಸಿದ್ದಾರೆ.
=========