Ad image

ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ ಕರೆ ವಿಶ್ವ ಯೋಗ ದಿನಾಚರಣೆ ದಶಮಾನೋತ್ಸವ ಯಶಸ್ವಿಗೊಳಿಸಿ

Vijayanagara Vani
ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ ಕರೆ ವಿಶ್ವ ಯೋಗ ದಿನಾಚರಣೆ ದಶಮಾನೋತ್ಸವ ಯಶಸ್ವಿಗೊಳಿಸಿ
ಚಿತ್ರದುರ್ಗಜೂ.10:
ಈ ಬಾರಿಯ ವಿಶ್ವ ಯೋಗ ದಿನಾಚರಣೆಗೆ ಹತ್ತು ವರ್ಷಗಳು ತುಂಬಲಿದ್ದು, ಅದರ ಅಂಗವಾಗಿ ಯೋಗ ದಿನಾಚರಣೆ ದಶಮಾನೋತ್ಸವ ಕಾರ್ಯಕ್ರಮವನ್ನು ಆಯುಷ್ ಇಲಾಖೆಯಿಂದ ಇದೇ ಜೂನ್ 21ರಂದು ನಗರದ ಹೃದಯ ಭಾಗದಲ್ಲಿರುವ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಚಂದ್ರಕಾಂತ್ ಎಸ್.ನಾಗಸಮುದ್ರ ಕರೆ ನೀಡಿದ್ದಾರೆ.
ನಗರದ ಜಿಲ್ಲಾ ಆಯುಷ್ ಕಚೇರಿ ಸಭಾಂಗಣದಲ್ಲಿ ಸೋಮವಾರ ಜೂನ್ 21ರಂದು ಆಚರಿಸಲಾಗುವ ವಿಶ್ವ ಯೋಗ ದಿನಾಚರಣೆ ದಶಮಾನೋತ್ಸವ ಕಾರ್ಯಕ್ರಮ ಅಂಗವಾಗಿ ಜಿಲ್ಲಾ ಆಯುಷ್ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಜಿಲ್ಲಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಯೋಗ ದಿನಾಚರಣೆ ದಶಮಾನೋತ್ಸವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ 19ರಂದು ಬೆಳಿಗ್ಗೆ 7ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಿಂದ ನಗರದೆಲ್ಲೆಡೆ ಯೋಗ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿವಿಧ ಇಲಾಖೆಗಳು ಹಾಗೂ ಮುಖ್ಯವಾಗಿ ಜಿಲ್ಲೆಯ ಯೋಗ ಸಾಧಕರ ಸಹಕಾರ ಅಗತ್ಯವಾಗಿದೆ. ಎಲ್ಲರೂ ಜಿಲ್ಲಾ ಆಯುಷ್ ಇಲಾಖೆಯೊಂದಿಗೆ ಕೈಜೋಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋರಿದರು.
ವಿಶ್ವ ಯೋಗ ದಿನಾಚರಣೆ ದಶಮಾನೋತ್ಸವ ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಿ ಮಾತನಾಡಿದ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ.ಟಿ.ಶಿವಕುಮಾರ್, ಯೋಗ ದಿನಾಚರಣೆ ದಶಮಾನೋತ್ಸವ ಅಂಗವಾಗಿ ಯೋಗ ಸಂಗಮ, ಯೋಗ ಸಂಧಾನ, ಯೋಗ ಬಂಧನ, ಹರಿತ್ ಯೋಗ, ಯೋಗೋದ್ಯಾನ , Yoga un plugged, ಧನುಷ್ ಯೋಗ, ಮಹಾಕುಂಬ್, ಯೋಗ ಪ್ರಭಾವ ಹೀಗೆ 10 ವಿಶಿಷ್ಟ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.
ಸಭೆಯಲ್ಲಿ ನಗರದ ವಿವಿಧ ಯೋಗ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆಯುಷ್ ವೈದ್ಯಾಧಿಕಾರಿಗಳು ಇದ್ದರು.

Share This Article
error: Content is protected !!
";