“ಜಿಲ್ಲಾಡಳಿತ ಭವನದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್”

Vijayanagara Vani
“ಜಿಲ್ಲಾಡಳಿತ ಭವನದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್”
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 15″78 ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ‌ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ‌. ಎನ್ ಶಿವಶಂಕರ ರವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ವರ್ಗದವರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!