ರಾಯಚೂರು,ಆ.01ತಾಲೂಕಿನ ಚಿಕ್ಕಸೂಗೂರು ಜಲ ಶುದ್ಧೀಕರಣ ಘಟಕಕ್ಕೆ ಇಂದು (ಆ.01ರ ಗುರುವಾರ ದಂದು) ರಾಯಚೂರು ನಗರಸಭೆಯ ಆಡಳಿತ ಅಧಿಕಾರಿಗಳು ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಯಚೂರು ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ನೀರು ಪೂರೈಸುವ ಮೊದಲು ನೀರಿನ ಟ್ಯಾಂಕ್‌ಗಳನ್ನು ಪರಿಶೀಲಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ನೀರಿನ ಶುದ್ದೀಕರಣ ಘಟಕಗಳ ನೀರನ್ನು ಪರೀಕ್ಷಿಸಿ ಕುಡಿಯಲು ಸೂಕ್ತವಾಗಿದೆ ಎಂಬುದನ್ನು ಖಾತ್ರಿಪಡಿಸಿಕೊಂಡ ಬಳಿಕ ಪೂರೈಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬೀಚಿಂಗ್ ಪೌಡರ್ ಮತ್ತು ಅಲಂಗಳನ್ನು ಬಳಸಿಕೊಂಡು ನೀರನ್ನು ಶುದ್ಧೀಕರಣ ಮಾಡಿ ಸರಬರಾಜು ಮಾಡಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ರಾಯಚೂರು ನಗರಸಭೆಯ ಪೌರಾಯುಕ್ತರಾದ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ತಾಂತ್ರಿಕ ವಿಭಾಗದ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.