—-
ಕೊಪ್ಪಳ:(ಆಗಸ್ಟ್-08):- ಜಿಲ್ಲಾಧಿಕಾರಿಗಳಾದ ಸುರೇಶ್ ಬಿ. ಇಟ್ನಾಳ್ ರವರ ಅಧ್ಯಕ್ಷತೆಯಲ್ಲಿ ಇಂದು ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರ ಮತ್ತು ಪಟ್ಟಣಗಳಲ್ಲಿ ಸಂಪೂರ್ಣವಾಗಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಬೇಕು,
ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆಗಳನ್ನು ಒದಗಿಸಬೇಕು ಎಂದು ಸೂಚನೆ ನೀಡಿ ಎಲ್ಲಾ ನಗರಗಳಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಪುಟ್ಪಾತಗಳನ್ನು ಕೂಡಲೇ ತೆರವುಗೊಳಿಸಿ ಸಾರ್ವಜನಿಕರಿಗೆ ಮುಕ್ತವಾಗಿಬೇಕೆಂದು ಸೂಚಿಸಿದರು, ಕಡ್ಡಾಯವಾಗಿ ಇ-ಖಾತೆಗಳನ್ನು ವಿತರಿಸಿ ಪ್ರಗತಿ ಸಾಧಿಸುವಂತೆ ತಿಳಿಸಿದರು,
ನಿಗದಿತ ಅವಧಿಯಲ್ಲಿ ಪ್ರಗತಿ ಸಾಧಿಸದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವುದಾದಗಿ ಎಚ್ಚರಿಸಿದರು,ಈ ಸಂದರ್ಭದಲ್ಲಿ ಜಿಲ್ಲಾ ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರ್ ಹಾಗೂ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು