Ad image

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ರೈಲ್ವೆ ಭೂಸ್ವಾಧೀನ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಲೋಕ್ ಅದಾಲತ್‍ನಲ್ಲಿ ಇತ್ಯರ್ಥಪಡಿಸಲು ಕ್ರಮವಹಿಸಿ

Vijayanagara Vani
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ರೈಲ್ವೆ ಭೂಸ್ವಾಧೀನ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಲೋಕ್ ಅದಾಲತ್‍ನಲ್ಲಿ ಇತ್ಯರ್ಥಪಡಿಸಲು ಕ್ರಮವಹಿಸಿ
ಚಿತ್ರದುರ್ಗ ಡಿ.12:
ರೈಲ್ವೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್ ಅದಾಲತ್ನಲ್ಲಿ ಇತ್ಯರ್ಥ ಪಡಿಸುವ ಪ್ರಕರಣಗಳನ್ನು ನಿಯಾಮಾನುಸಾರ ಇತ್ಯರ್ಥಪಡಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕಾ ಅದಾಲತ್ನಲ್ಲಿ ಇತ್ಯರ್ಥಪಡಿಸುವ ಬಗ್ಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ, ಕಾಮಗಾರಿ ಪ್ರಾರಂಭಿಸಬೇಕು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮುಂದಿನ ಲೋಕ್ ಅದಾಲತ್ನಲ್ಲಿ ಇತ್ಯರ್ಥಪಡಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗದ ವಿಭಾಗೀಯ ಅಭಿಯಂತರ ರಜತ್ ತೆನಿಯಾ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್ ಸೇರಿದಂತೆ ಮತ್ತಿತರರು ಇದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕಾ ಅದಾಲತ್ನಲ್ಲಿ ಇತ್ಯರ್ಥಪಡಿಸುವ ಕುರಿತು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಇದ್ದರು.
Share This Article
error: Content is protected !!
";