Ad image

ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

Vijayanagara Vani
ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ
filter: 0; fileterIntensity: 0.0; filterMask: 0; captureOrientation: 0; module: photo; hw-remosaic: false; touch: (-1.0, -1.0); modeInfo: ; sceneMode: 128; cct_value: 0; AI_Scene: (-1, -1); aec_lux: 144.0; aec_lux_index: 0; hist255: 0.0; hist252~255: 0.0; hist0~15: 0.0; albedo: ; confidence: ; motionLevel: 0; weatherinfo: null; temperature: 41;

ರಾಯಚೂರು,ಮೇ.28(ಕ.ವಾ):- ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ಕ್ಕೆ ಸಂಬAಧಿಸಿದAತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಮೇ.೨೮ರಂದು ನಗರದ ಎಸ್.ಆರ್.ಪಿ.ಎಸ್ ಪದವಿಪೂರ್ವ ಕಾಲೇಜಿನಲ್ಲಿರುವ ಭದ್ರತಾ ಕೊಠಡಿಗಳು ಹಾಗೂ ಮತಎಣಿಕೆ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೇ.೭ರಂದು ಲೋಕಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆದಿದ್ದು, ಜೂ.೪ರಂದು ಮತೆಣಿಕೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತಎಣಿಕೆ ಕೆಂದ್ರಕ್ಕೆ ಭೇಟಿ ನೀಡಿದ ಅವರು, ಮತ ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಾಗದಂತೆ ಸರಿಯಾದ ರೀತಿಯಲ್ಲಿ ನೀಡಿಕೊಳ್ಳಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಮತ ಎಣಿಕೆ ಸಿಬ್ಬಂದಿ, ರಾಜಕೀಯ ಪಕ್ಷಗಳ ಏಜಂಟರುಗಳಿಗೆ, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿಗೆ ಸರಿಯಾದ ರೀತಿಯಲ್ಲಿ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಮತ ಎಣಿಕೆ ಕೇಂದ್ರದ ಸುತ್ತಲೂ ಸ್ವಚ್ಛತೆಯನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ನಂತರ ಮಾದ್ಯಮ ಕೊಠಡಿಗೆ ಭೇಟಿ ನೀಡಿ, ಮತ ಎಣಿಕೆ ವರದಿಗಾಗಿ ಬರುವ ಮಾದ್ಯಮದವರಿಗೆ ಸರಿಯಾದ ರೀತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಿಕೊಳ್ಳಬೇಕು. ಮತ್ತು ಮಾದ್ಯಮ ಕೊಠಡಿಯಲ್ಲಿ ಎಲ್.ಇ.ಡಿ ಪರದೆಗಳು ಹಾಗೂ ಅಂತರ್ಜಾಲದ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಮಾಡಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಎಸ್.ಎಸ್ ಸಂಪಗಾವಿ, ನಗರಸಭೆ ಪೌರಾಯುಕ್ತ ಜಿ.ಎನ್ ಚಲಪತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share This Article
error: Content is protected !!
";