Ad image

ಜಿಲ್ಲಾ ಗ್ಯಾರೆಂಟಿ ಪ್ರಾಧಿಕಾರ ಸಭೆ

Vijayanagara Vani
ಜಿಲ್ಲಾ ಗ್ಯಾರೆಂಟಿ ಪ್ರಾಧಿಕಾರ ಸಭೆ

ಧಾರವಾಡ () ಡಿಸೆಂಬರ 06: ಜಿಲ್ಲಾ ಗ್ಯಾರಂಟಿ ಯೋಜನೆಗಳಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಸಾಂಸ್ಥಿಕ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ಜರುಗಿತು.

- Advertisement -
Ad imageAd image

ಗ್ಯಾರಂಟಿ ಯೋಜನೆಯ ಬಗ್ಗೆ ಅಧಿಕಾರಿಗಳು ಗಮಹರಿಸಿ, ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಬೇಕು. ಕೆಲವು ಭಾಗಗಳಲ್ಲಿ ಗ್ಯಾರಂಟಿ ಯೋಜನೆ ಸರಿಯಾಗಿ ತಲುಪದಿರುವ ಬಗೆಗೆ ದೂರುಗಳು ಬಂದಿದ್ದು, ಅಂತಹ ದೂರುಗಳನ್ನು ಪರಿಶೀಲಿಸಬೇಕೆಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ. ಅವರು ಮಾತನಾಡಿ, ಹಳ್ಳಿಯಲ್ಲಿ ಕೆಲಸ ಮಾಡುವಂತ ಶಿಕ್ಷಕಿಯರಿಗೆ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಬಸ್ ನಿಲ್ದಾಣದಲ್ಲಿ ಮಹಿಳೆಯರಿದ್ದರೂ ಬಸ್ ನಿಲುಗಡೆ ಮಾಡದಿರುವಂತ ದೂರುಗಳು ಬರುತ್ತಿದ್ದು, ಅಧಿಕಾರಿಗಳು ಅದನ್ನು ಗಮನಿಸಿ ಸರಿಯಾದ ಕ್ರಮ ಜರುಗಿಸಬೇಕು.

ಯುವನಿಧಿ ಯೋಜನೆಯ ಬಗ್ಗೆ ಹೆಚ್ಚಿನ ಪ್ರಚಾರ ಮಾಡಿ, ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು. ಡಿಜಿಟಲ್ ಮಾಧ್ಯಮದ ಬಳಕೆ ಹೆಚ್ಚಾಗಿರುವುದರಿಂದ ಯುವನಿಧಿ ಯೋಜನೆಯ ಬಗ್ಗೆ ಡಿಜಿಟಲ್ ಮಾಧ್ಯಮಗಳಲ್ಲಿ ಹೆಚ್ಚಾಗಿ ಪ್ರಚಾರ ಮಾಡಿ ತಲುಪಿಸುವ ವ್ಯವಸ್ಥೆ ಮಾಡಬೇಕು ಎಂದು ಅವರು ತಿಳಿಸಿದರು.

ಗ್ಯಾರಂಟಿ ಯೋಜನೆಗಳಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಮುರಗಯ್ಯಾ ವಿರಕ್ತಮಠ, ಅಬ್ದುಲ್ ರಶೀದ ಬೋಳಾಬಾಹಿ ಹಾಗೂ ರತ್ನಾ ತೇಗೂರಮಠ ಅವರು ಸಭೆಯಲ್ಲಿ ಮಾತನಾಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳಅನುಷ್ಠಾನ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.

****

Share This Article
error: Content is protected !!
";