ಬಳ್ಳಾರಿ,ಜ.03:
ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಮಿತಿಯ ದ್ವಿತೀಯ ತ್ರೆöÊಮಾಸಿಕ ಸಭೆಯನ್ನು ಜ.13 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್‌ನ ನಜೀರ್‌ಸಾಬ್ ಸಭಾಂಗಣದಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಂ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಗೆ ಸಂಬoಧಪಟ್ಟ ಇಲಾಖಾ ಅಧಿಕಾರಿಗಳು ಅಗತ್ಯಪೂರ್ಣ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.