Ad image

ಜಿಲ್ಲಾ ಕನಕ ನೌಕರರ ಸಂಘದಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ,

Vijayanagara Vani
ಜಿಲ್ಲಾ ಕನಕ ನೌಕರರ ಸಂಘದಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ,
ಸಿಂಧನೂರು: ಜಿಲ್ಲಾ ಕನಕ ನೌಕರರ ಸಂಘದಿಂದ ಸಿಂಧನೂರಿನಲ್ಲಿ ಮೊಟ್ಟಮೊದಲ ಬಾರಿಗೆ  ರಾಯಚೂರು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರವನ್ನು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕನಕಮಂಗಲ ಭವನದಲ್ಲಿ ಆಗಸ್ಟ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಬಸಪ್ಪ ಹ್ಯಾಟಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ 7 ತಾಲೂಕಿನಿಂದ ರಾಯಚೂರು ಜಿಲ್ಲಾ ಕನಕ ನೌಕರರ ಸಂಘವು ಪ್ರತಿ ವರ್ಷವೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸುತ್ತಾ ಬಂದಿದ್ದು, 2023-24 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕ ಪಡೆದ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೂ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ವೈದ್ಯಕೀಯ, ಹಾಗೂ ಡಿಪ್ಲೊಮಾ ಪದವಿಗಳಲ್ಲಿ ಬಂಗಾರ ಪದಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ, 2023-24 ರಲ್ಲಿ ವಿಶೇಷ ಸಾಧನೆಗೈದ ಸಾಧಕರಿಗೆ ಮತ್ತು ನೌಕರರಿಗೆ ವಿಶೇಷ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾಗಿನೆಲೆ ಕನಕಗುರು ಪೀಠ ತಿಂಥಣಿ ಬ್ರಿಡ್ಜ್ ನ ಪರಮಪೂಜ್ಯ ಶ್ರೀ ಶ್ರೀ ಸಿದ್ದರಾಮನಂದಪುರಿ ಮಹಾಸ್ವಾಮಿಗಳು, ಸಿಂಧನೂರು ಸುಕಾಲಪೇಟೆಯ ನಂಜುಂಡಯ್ಯ ಗುರುವಿನ್, ತುರ್ವಿಹಾಳ ಅಮೋಘ ರೇವಣಸಿದ್ದೇಶ್ವರ ಮಠದ ಶ್ರೀ ಮಾದಯ್ಯ ಗುರುವಿನ್, ಶ್ರೀ ಚಿದಾನಂದಯ್ಯ ಗುರುವಿನ್, ಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ.
ಮಾಜಿ ಸಂಸದ ಕೆ.ವಿರುಪಾಕ್ಷಪ್ಪ ಉದ್ಘಾಟಿಸಲಿದ್ದಾರೆ. ರಾಜ್ಯ ಕುರುಬರ ಸಂಘದ ಅಧ್ಯಕ್ಷರು, ಜಿಲ್ಲಾ ಮತ್ತು ತಾಲೂಕು ಅಧ್ಯಕ್ಷರು, ಜನಪ್ರತಿನಿಧಿಗಳು, ಸಮಾಜದ ಮುಖಂಡರು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.ಈ ಸಂದರ್ಭದಲ್ಲಿ: ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ಜಾಲಿಬೆಂಚಿ, ತಾಲೂಕು ಅಧ್ಯಕ್ಷ ಮಲ್ಲಪ್ಪ ಬಸ್ಸಾಪುರ, ಶಿಕ್ಷಕ ವೀರೇಶ ಸಾಸಲಮರಿ, ಸೇರಿದಂತೆ ಅನೇಕರಿದ್ದರು.

Share This Article
error: Content is protected !!
";