Ad image

ಬಳ್ಳಾರಿ: ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

Vijayanagara Vani
ಬಳ್ಳಾರಿ: ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ
ಬಳ್ಳಾರಿ,ಜೂ.21
ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಕನ್ನಡಾಭಿಮಾನಿಗಳಿಗೆ ಅವಕಾಶ ದೊರೆತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಅವರು ಹೇಳಿದರು.
ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆಗಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಪತ್ರಿಕಾ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ನುಡಿಹಬ್ಬ, ಕನ್ನಡದ ಜಾತ್ರೆ ಇದ್ದಂತೆ. 68 ವರ್ಷಗಳ ಬಳಿಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡAತೆ ಅಖಂಡ ಜಿಲ್ಲೆಯಲ್ಲಿ ಡಿಸೆಂಬರ್ ನಲ್ಲಿ ಜರುಗುತ್ತಿದ್ದು, ಎರಡು ಜಿಲ್ಲೆಗಳ ಕನ್ನಡ ಸಾಹಿತ್ಯಕಾರರು, ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಮಾಧ್ಯಮದವರ ಪರಸ್ಪರ ಸಹಕಾರ ಮತ್ತು ಸಹಭಾಗಿತ್ವ ಅಗತ್ಯವಿದೆ ಎಂದರು.
ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಸೂಕ್ತ ಎಂದು ಸರ್ಕಾರದ ಗಮನಕ್ಕೆ ತರಲಾಗಿದೆ. ಈ ಕುರಿತು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡAತೆ ಜಿಲ್ಲಾಧಿಕಾರಿಗಳು, ಹಿರಿಯ ಸಾಹಿತ್ಯ ಮುಖಂಡರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ದೀರ್ಘಾವಧಿಯ ನಂತರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಬಳ್ಳಾರಿಯಲ್ಲಿ ನಡೆಯುತ್ತಿದ್ದು, ಇದಕ್ಕೆ ಬೇಕಾದ ಸ್ಥಳ ನಿಗದಿ, ದಿನಾಂಕ ಗೊತ್ತುಪಡಿಸುವಿಕೆ ಮತ್ತೀತರ ಅಗತ್ಯ ಕ್ರಮಗಳ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗುವುದು. ಬಳಿಕ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.
ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ವಿಜೃಂಭಣೆಯಿAದ ಆಯೋಜಿಸಲು ಜಿಲ್ಲಾಡಳಿತದೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳು ಸಹಾಯ, ಸಹಯೋಗ ಮತ್ತು ಸಮಾಲೋಚನೆಯಿಂದ ಉತ್ಸುಕರಾಗಿದ್ದು, ಸಮ್ಮೇಳನಕ್ಕೆ ಸಾರ್ವಜನಿಕರು, ಗಡಿಭಾಗದ ಜನರು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ತಿಳಿಸಿದರು.
ಹಲವು ವರ್ಷಗಳ ಬಳಿಕ ಈ ಭಾಗದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಹಾಗಾಗಿ ಈ ಕುರಿತು ಸರ್ಕಾರಕ್ಕೆ ಅನುದಾನದ ಬೇಡಿಕೆ ಪ್ರಸ್ತಾಪಿಸಿದ್ದೇವೆ. ಜಿಲ್ಲಾಡಳಿತವು ಸಹ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ವರದಿ ನೀಡಲಿದೆ ಎಂದು ಸ್ಪಷ್ಟಪಡಿಸಿದರು.
88 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಈ ಭಾಗದಲ್ಲಿ ನಡೆಯುತ್ತಿರುವುದು ಈ ಭಾಗದ ಜನರ ಬಹುದಿನಗಳ ಬೇಡಿಕೆ ಮತ್ತು ಸದಾವಕಾಶ ಸಿಕ್ಕಿದೆ. ಹಾಗಾಗಿ ಇಲ್ಲಿ ನಡೆಯುವುದರಿಂದ ಕನ್ನಡದ ಅಸ್ಮಿತೆಯು ಗಡಿಭಾಗದ ಎಲ್ಲೆ ಮೀರಿ ಹರಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಳ್ಳಾರಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ, ಚಿತ್ರದುರ್ಗ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಹಾಸನ ಜಿಲ್ಲಾ ಕಸಾಪ ಅಧ್ಯಕ್ಷ ಮಲ್ಲೇಶ್ ಗೌಡ, ಹಾವೇರಿ ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಬಿ.ಹಿರೇಮಠ, ದಾವಣಗೆರೆ ಜಿಲ್ಲಾ ಕಸಾಪ ಅಧ್ಯಕ್ಷ ವಾಮದೇವಪ್ಪ ಹಾಗೂ ಇತರರು ಅವರು ಸುದ್ದಿಗೋಷ್ಠಿಯಲ್ಲಿದ್ದರು.

Share This Article
error: Content is protected !!
";