ಕೊಪ್ಪಳ ಏಪ್ರಿಲ್ 04 ಗಂಗಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬೇಸಿಗೆ ನಿಮಿತ್ಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ತಾಲೂಕಾ ಪಂಚಾಯತಿ ಕಛೇರಿಯಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ ಎಂದು ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆಗಳು ಆಗಬಾರದೆಂಬ ದೃಷ್ಟಿಯಿಂದ, ಬೇಸಿಗೆ ನಿಮಿತ್ಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಲು ಹಾಗೂ ತಕ್ಷಣವೇ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಗಂಗಾವತಿ ತಾ.ಪಂ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ.
ತಾಲ್ಲೂಕಿನ ಯಾವುದೇ ಗ್ರಾಮ ಪಂಚಾಯತಿಗಳಲ್ಲಿ ಉಲ್ಬಣಗೊಳ್ಳುವ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ಕರೆ ಮಾಡಬಹುದಾಗಿದ್ದು, ಈ ಸಹಾಯವಾಣಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ದ್ವಿ.ದ.ಲೆ.ಸ ಎಂ.ಸಂತೋಷ ಮೊ.ಸಂ: 6361940327 ಇವರಿಗೆ ಬೆಳಿಗ್ಗೆ 9 ರಿಂದ 1.30 ರವರೆಗೆ ಮತ್ತು ಕಾರ್ಯದರ್ಶಿ ಯಮನೂರಪ್ಪ ಮೊ.ಸಂ: 8197895571 ಇವರಿಗೆ ಮಧ್ಯಾಹ್ನ 2 ರಿಂದ ಸಂಜೆ 7.30 ರವರೆಗೆ ಕರೆ ಮಾಡಿ ದೂರುಗಳನ್ನು ದಾಖಲಿಸಿ, ಕೂಡಲೇ ಕುಡಿಯುವ ನೀರಿನ ಸಮಸ್ಯೆಯನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದು ಗಂಗಾವತಿ ತಾಲೂಕ ಪಂಚಾಯತ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.