Ad image

ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಜಾಥಾಕ್ಕೆ ಚಾಲನೆ ಮಾದಕ ವಸ್ತುಗಳ ಸೇವನೆ ಮನುಷ್ಯನ ಆರೋಗ್ಯಕ್ಕೆ ಹಾನಿಕರ: ನ್ಯಾ.ಸಿದ್ದರಾಮಪ್ಪ

Vijayanagara Vani
ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಜಾಥಾಕ್ಕೆ ಚಾಲನೆ  ಮಾದಕ ವಸ್ತುಗಳ ಸೇವನೆ ಮನುಷ್ಯನ ಆರೋಗ್ಯಕ್ಕೆ ಹಾನಿಕರ: ನ್ಯಾ.ಸಿದ್ದರಾಮಪ್ಪ

ರಾಯಚೂರು,ಜೂ.26ಮಾದಕ ವಸ್ತುಗಳ ಸೇವನೆಯು ಮನುಷ್ಯನ ಆರೋಗ್ಯಕ್ಕೆ ಹಾನಿಕರವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸಿದ್ದರಾಮಪ್ಪ ಕಲ್ಯಾಣರಾವ್ ಅವರು ಹೇಳಿದರು.ವರು ಜೂ.26ರ ಬುಧವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾಸಿಕ ಆರೋಗ್ಯ ವಿಭಾಗ, ರಿಮ್ಸ್ ಆಸ್ಪತ್ರೆ, ನವೋದಯ ಆಸ್ಪತ್ರೆ, ಭಾರತೀಯ ಮನೋವೈದ್ಯಕೀಯ ಸಂಘ ಕರ್ನಾಟಕ ಶಾಖೆ ಇವರಗಳ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಜಾಥಾಕ್ಕೆ ಚಾಲನೆ ನೀಡಿ, ಮಾತನಾಡಿದರು.

1989ರಿಂದ ಪ್ರತಿವರ್ಷ ಜೂನ್ 26ಅನ್ನು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನವನ್ನು ಒಂದೊ0ದು ಘೋಷಣೆಯೊಂದಿಗೆ ಆಚರಿಸಲಾಗುತ್ತದೆ. ಪ್ರಸಕ್ತ ವರ್ಷ “ಪುರಾವೆಗಳು ಸ್ಪಷ್ಟವಾಗಿವೆ: ನಿವಾರಣೆಯಲ್ಲಿ ಹೂಡಿಕೆ ಮಾಡಿ” ಎಂಬ ಘೋಷಣೆಯೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಇತ್ತೀಚೆಗೆ ಮೊಬೈಲ್ ಸೇರಿದಂತೆ ವಿದ್ಯುನ್ಮಾನ ಉಪಕರಣಗಳ ಅತಿಯಾದ ಬಳಕೆಯೂ ವ್ಯಸನವಾಗಿ ಪರಿಣಮಿಸಿದ್ದು, ಪೋಷಕರು ಈ ಬಗ್ಗೆ ಗಮನಹರಿಸಬೇಕು. ಯುವಕರು ಅಂತರ್ಜಾಲದಲ್ಲಿ ಅವಶ್ಯ ಇರುವ ಮಾಹಿತಿಯನ್ನು ಪಡೆಯಬೇಕು. ಆದರೆ ಯುವಕರು ಅವಶ್ಯವಿಲ್ಲದ ಮಾಹಿತಿ ಪಡೆಯುವ ಮೂಲಕ ಯುವಕರು ಮಾದಕ ವಸ್ತುಗಳ ಕಡೆಮುಖ ಮಾಡುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಅವರು ಮಾತನಾಡಿ,ಯುವಕರಲ್ಲಿ ಮಾದಕ ವಸ್ತುಗಳ ಸೇವನೆ ಹೆಚ್ಚುತ್ತಿದ್ದು, ಇದರ ದುಷ್ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಾದಕ ವಸ್ತುಗಳ ಸೇವನೆ ಯಾರೂ ಮಾಡಬಾರದು. ಆರೋಗ್ಯಯುತ ದೇಶದ ನಿರ್ಮಾಣದಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ. ಇದು ಜವಾಬ್ದಾರಿಯೂ ಕೂಡ ಆಗಿದೆ. ಮಾದಕ ವಸ್ತು ವ್ಯಸನ ಎಂದರೆ ಒಂದು ರೀತಿಯ ಮಾನಸಿಕ ಕಾಯಿಲೆ, ಮಾದಕ ವಸ್ತುಗಳ ಸೇವನೆಯಿಂದ ಮಾನಸಿಕ, ದೈಹಿಕ, ಸಾಮಾಜಿಕ, ಆರ್ಥಿಕ, ಬೌದ್ಧಿಕ, ನೈತಿಕವಾಗಿ ವ್ಯಕ್ತಿಯ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಂದ ನಾಟಕದ ಮೂಲಕ ಜಾಗೃತಿ: ನಗರದ ಜಿಲ್ಲಾಧಿಕಾರಗಳ ಕಚೇರಿಯ ಮುಖ್ಯದ್ವಾರದ ಮುಂದೆ ರಿಮ್ಸ್ ಹಾಗೂ ವಿವಿಧ ಕಾಲೇಜಿನ ಮೆಡಿಕಲ್ ವಿದ್ಯಾರ್ಥಿಗಳಿಂದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನದ ಕುರಿತು ಬಿದಿ ನಾಟಕ ಮಾಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ಅಂಗವಾಗಿ ಮಾದಕ ವಸ್ತುಗಳ ಸೇವನೆ ಕುರಿತು ಘೋಷಣೆಗಳ ಮೂಲಕ ಜಾಥಾವನ್ನು ನಡೆಸಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠ ಅಧಿಕಾರಿ ಶಿವಕುಮಾರ್, ರಿಮ್ಸ್ ನಿರ್ದೇಶಕ ಡಾ.ರಮೇಶ್ ಬಿ.ಎಚ್, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ವಿಜಯಶಂಕರ, ಜಿಲ್ಲಾ ಮಾಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಯಶೋದ ಎನ್, ಜಿಲ್ಲಾ ಸರ್ವಕ್ಷಣಾಧಿಕಾರಿ ಡಾ.ಗಣೇಶ, ಜಿಲ್ಲಾ ಮಾಸಿಕ ಆರೋಗ್ಯ ಹಿರಿಯ ಮನೋವೈದ್ಯ ಡಾ.ಮನೋಹರ ವೈ.ಪತ್ತಾರ, ರಾಯಚೂರು ತಾಲೂಕು ಆರೋಗ್ಯ ಅಧಿಕಾರಿ ಪ್ರಜ್ವಲ್ ಕುಮಾರ್ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರು ಇದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ಮಾಡಿದರು.

Share This Article
error: Content is protected !!
";