ಚಿತ್ರದುರ್ಗಆ.09:
78ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಆಗಸ್ಟ್ 12 ರಿಂದ 15 ವರೆಗೆ ನಶಾ ಮುಕ್ತ ಭಾರತ ಅಭಿಯಾನ ಆಯೋಜಿಸಲಾಗಿದೆ. ಇದರ ಅಂಗವಾಗಿ ಆಗಸ್ಟ್ 12 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಮಹಾವಿದ್ಯಾಲಯ, ತಾಂತ್ರಿಕ ಹಾಗೂ ವೈದ್ಯಕೀಯ ಮಹಾವಿದ್ಯಾಲಯ, ಐಟಿಐ, ಐಐಎಂಎಸ್, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞಾ ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಲಾ ಕಾಲೇಜು ಆವರಣಗಳಲ್ಲಿ ನಶಾ ಮುಕ್ತ ಭಾರತ ಅಭಿಯಾನದ ನೆನಪಿನ ಪ್ರಯುಕ್ತ ಸಸಿಗಳನ್ನು ನೆಡುವುದು. ಆಗಸ್ಟ್ 15 ವರೆಗೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿಚಾರಗೋಷ್ಠಿ, ಕಾರ್ಯಾಗಾರ, ರ್ಯಾಲಿ, ಮ್ಯಾರಥಾನ್ ಹಾಗೂ ಬೀದಿ ನಾಟಕಗಳನ್ನು ಪ್ರಸ್ತುತ ಪಡಿಸಲಾಗುವುದು.
ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಗಳ ಭಾಷಣದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಕುರಿತು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದ್ದಾರೆ.
ಕಾರ್ಯಕ್ರಮಗಳನ್ನು ಆಯೋಜಿಸಿರುವ ಕುರಿತು ಪೋಟೊ ವಿಡಿಯೋ ಹಾಗೂ ವರದಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಇ-ಮೇಲ್ ಐಡಿ ddwocta@gmail.com ಅಥವಾ ವಾಟ್ಸ್ಪ್ ಸಂಖ್ಯೆ 9731282405 ಕಳುಹಿಸಲು ತಿಳಿಸಿದೆ.