ಕೊಪ್ಪಳ ಸೆಪ್ಟಂಬರ್ 18. , ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಿವಿಧೆಡೆ ಸೆ.20 ಹಾಗೂ ಸೆ.21 ಮತ್ತು ಸೆ.22ರಂದು ತಾಲೂಕುಮಟ್ಟದ ದಸರಾ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ.
ಸೆ.20ರಂದು ಯಲಬುರ್ಗಾ ತಾಲೂಕಿನ ಬೇವೂರ ಗ್ರಾಮದ ಕೂಡಲಸಂಗಮೇಶ್ವರ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ, ಸೆ.21ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ, ಗಂಗಾವತಿ ತಾಲೂಕು ಕ್ರೀಡಾಂಗಣದಲ್ಲಿ, ಕುಷ್ಟಗಿ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರಟಗಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ, ಕನಕಗಿರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮತ್ತು ಸೆ.22ರಂದು ಕುಕನೂರ ತಾಲೂಕಿನ ಕುದರಿಮೋತಿಯ ಎಮ್.ಎಮ್.ಡಿ.ಆರ್.ಎಸ್.ನಲ್ಲಿ ತಾಲೂಕುಮಟ್ಟದ ದಸರಾ ಕ್ರೀಡಾಕೂಟಗಳು ನಡೆಯಲಿವೆ.
ನಿಯಮಗಳು: ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಅರ್ಹರಿರುತ್ತಾರೆ. ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಅರೆ ರಕ್ಷಣಾ ಪಡೆ ಸೇರಿದ ಕ್ರೀಡಾಪಟುಗಳಿಗೆ ಭಾಗವಹಿಸಲು ಅರ್ಹರಲ.್ಲ ಆಯಾ ತಾಲ್ಲೂಕಿನ ಕ್ರೀಡಾಪಟು ಅಥವಾ ತಂಡ ಅದೇ ತಾಲೂಕಿನ ಕ್ರೀಡಾಕೂಟದಲ್ಲಿ ಭಾಗವಹಿಸತಕ್ಕದ್ದು. ಬೇರೆ ತಾಲ್ಲೂಕಿನ ಕ್ರೀಡಾಪಟುಗಳಿಗೆ ಹಾಗೂ ತಂಡಗಳಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ. ಬೇರೆ ಜಿಲ್ಲೆಗಳ ಯುವಕ ಯುವತಿಯರು ಸ್ಥಳೀಯವಾಗಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮಾತ್ರ ಅವಕಾಶ ನೀಡುವುದು. (ಕಡ್ಡಾಯವಾಗಿ ಶಾಲೆಯ/ಕಾಲೇಜಿನ ಗುರುತಿನ ಚೀಟಿ ಹೊಂದಿರತಕ್ಕದ್ದು) ಮತ್ತು ತಾಲ್ಲೂಕುಮಟ್ಟದ ಕ್ರೀಡಾಕೂಟದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ, ಕುಕನೂರ ಮತ್ತು ಯಲ್ಬುರ್ಗಾ ತಾಲೂಕು-9741742731, ಕುಷ್ಟಗಿ ತಾಲೂಕು-9945501033, 7406484462 ಗಂಗಾವತಿ ತಾಲೂಕು-9964279957, ಕಾರಟಗಿ ತಾಲೂಕು-9535831941 ಕನಕಗಿರಿ ತಾಲೂಕು-9008867656 ಕೊಪ್ಪಳ ತಾಲೂಕು-9591292420 ಗೆ ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.