ಬಳ್ಳಾರಿ
ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜೆಎಸ್ಡಬ್ಲ್ಯೂ ಫೌಂಡೇಶನ್ ವತಿಯಿಂದ ‘ಎಡುಕಾನ್-2024, ಕೈಜೋಡಿಸಿ ಕಲಿಸೋಣ’ ಎಂಬ ವಿಷಯದೊಂದಿಗೆ ಆಗಸ್ಟ್ 01 ಮತ್ತು 02 ರಂದು ತೋರಣಗಲ್ಲಿನ ಜೆಎಸ್ಡಬ್ಲ್ಯೂನ ವಿದ್ಯಾನಗರದ ಜೆ-ಮ್ಯಾಕ್ಸ್ ಹಾಲ್ನಲ್ಲಿ ಶಿಕ್ಷಣ ಸಮಾವೇಶವನ್ನು ಆಯೋಜಿಸಲಾಗುತ್ತಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದು.
ಗುಣಾತ್ಮಕ ಶಿಕ್ಷಣಕ್ಕಾಗಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ನವೀನ ವಿಧಾನಗಳ ಮೂಲಕ ಪರಿವರ್ತನೆಯನ್ನು ತರಲು ಶಿಕ್ಷಣ ತಜ್ಞರು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಶಿಕ್ಷಣ ಭಾಗಿದಾರರನ್ನು ಒಗ್ಗೂಡಿಸುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ.
ಸಮಾವೇಶದಲ್ಲಿ ಭಾಗವಹಿಸಲು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ ಅಥವಾ ವೆಬ್ಸೈಟ್ https://cpikalaburgi.karnataka.gov.in ಇಲ್ಲಿ ನೋಂದಾಯಿಸಿಕೊಳ್ಳಬಹುದು.
ಕಾರ್ಯಕ್ರಮದ ವಿವರವಾದ ವೇಳಾಪಟ್ಟಿಯನ್ನು ನಂತರ ತಿಳಿಸಲಾಗುವುದು. ಸೀಮಿತ ಸಾಮಥ್ರ್ಯದ ವಸತಿ ಸೌಲಭ್ಯದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೋಂದಣಿಗೆ ಜುಲೈ 20 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನೋಡಲ್ ವ್ಯಕ್ತಿಗಳಾದ ತೋರಣಗಲ್ಲಿನ ಜೆಎಸ್ಡಬ್ಲ್ಯೂ ಫೌಂಡೇಶನ್ ಸಿಎಸ್ಆರ್ನ ಹಿರಿಯ ವ್ಯವಸ್ಥಾಪಕ ರಾಜಶೇಖರ ರಾಜು ಅವರ ಮೊ.9989833133 ಮತ್ತು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಚನ್ನಬಸಪ್ಪ ಮುಧೋಳ ಅವರ ಮೊ.8310259380 ಗೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.