ಚಿತ್ರದುರ್ಗಜುಲೈ11:
ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯವು ಪರಸ್ಪರ ಒಡಂಬಡಿಕೆಯೊಂದಿಗೆ ದೂರ ಶಿಕ್ಷಣ ಮಾದರಿಯಲ್ಲಿ ಪದವಿ, ಸ್ನಾತಕೋತ್ತರ ಪದವಿಯ ಉನ್ನತ ಶಿಕ್ಷಣವನ್ನು ಹಾಗೂ ವಿವಿಧ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ಶಿಕ್ಷಣವನ್ನು ಶಾಲಾ-ಕಾಲೇಜಿನಿಂದ ಹೊರಗುಳಿದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನೀಡುವ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 25 ಅರ್ಜಿ ಸಲ್ಲಿಸಲು ಕೊನೆಯದ ದಿನ
ಅರ್ಜಿಗಳನ್ನು ಜಾಲತಾಣ ವಿಳಾಸ http://dom.karnataka.gov.in ಹಾಗೂ http://minority.ksouportal.com ನಲ್ಲಿ ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.