ಧಾರವಾಡ 03: ಭಾರತ ಚುನಾವಣಾ ಆಯೋಗವು ಚುನಾವಣೆಗೆ ಸಂಬಂಧಿಸಿದಂತೆ, ಮತದಾರರ ಶಿಕ್ಷಣ ಮತ್ತು ಅರಿವು ಮೂಡಿಸುವಲ್ಲಿ 2024 ನೇ ಸಾಲಿನಲ್ಲಿ ಅತ್ಯತ್ತಮ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡ ಮಾಧ್ಯಮಗಳಾದ ಮುದ್ರಣ ಮಾಧ್ಯಮ, ವಿದ್ಯುನಮಾನ ಮಾಧ್ಯಮದ ಟಿ.ವಿ ಮತ್ತು ರೇಡಿಯೋ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಮೀಡಿಯಾ ಅವಾರ್ಡ-2024 ನೀಡಲು ಅರ್ಜಿ ಆಹ್ವಾನಿಸಿದೆ.
ರಾಜ್ಯದ ಆಸಕ್ತ ಮಾಧ್ಯಮ ಸಂಸ್ಥೆಗಳು ಭಾಗವಹಿಸಬಹುದು. ಮಾಧ್ಯಮ ಸಂಸ್ಥೆಗಳು ಡಿಸೆಂಬರ 12, 2024 ರೊಳಗಾಗಿ ನೇರವಾಗಿ ಭಾರತ ಚುನಾವಣಾ ಆಯೋಗಕ್ಕೆ ತಮ್ಮ ಮಾಧ್ಯಮದ ಮೂಲಕ ಮತದಾರರ ಶಿಕ್ಷಣ ಮತ್ತು ಅರಿವು ಮೂಡಿಸುವಲ್ಲಿ 2024 ನೇ ಸಾಲಿನಲ್ಲಿ ಅತ್ಯತ್ತಮ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡ ಬಗ್ಗೆ ಪ್ರಸ್ತಾವನೆಯನ್ನು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ನಿರ್ವಾಚನಾ ನಿಲಯ, ಶೇಷಾದ್ರಿ ರಸ್ತೆ, ಬೆಂಗಳೂರು-560001 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಸಹಾಯಕ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.