ದೇಶಾಭಿಮಾನ ಹೆಚ್ಚಿಸಿದ ತಿಂಗಳ ಸೊಬಗು ಸಾಂಸ್ಕೃತಿಕ ಕಾರ್ಯಕ್ರಮ

Vijayanagara Vani
ದೇಶಾಭಿಮಾನ ಹೆಚ್ಚಿಸಿದ ತಿಂಗಳ ಸೊಬಗು ಸಾಂಸ್ಕೃತಿಕ ಕಾರ್ಯಕ್ರಮ
ಬಳ್ಳಾರಿ,ಆ.13
ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಾಂಸ್ಕೃತಿಕ ಸಮುಚ್ಚಯ ನಿರ್ವಹಣಾ ಸಮಿತಿ ಇವರ ವತಿಯಿಂದ ಸೋಮವಾರ ಸಂಜೆ ಆಯೋಜಿಸಲಾಗಿದ್ದ “ತಿಂಗಳ ಸೊಬಗು” ಸಾಂಸ್ಕೃತಿಕ ಕಾರ್ಯಕ್ರಮ ಸಾರ್ವಜನಿಕರಲ್ಲಿ ದೇಶಾಭಿಮಾನ ಮೂಡಿಸಿತು.
ನಗರದ ಡಾ.ರಾಜಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮoದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇಶಭಕ್ತಿಯ ಲಹರಿ ಹರಿಯುತಿತ್ತು.
ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರನ್ನೂ ಆಕರ್ಷಿಸಿತು. ದೇಶಭಕ್ತಿ ಗೀತೆಗಳ ಗಾಯನ ಮತ್ತು ಸಂಗೀತಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಚಿಣ್ಣರ ಕಲಾನೃತ್ಯಕ್ಕೆ ಕಲಾಭಿಮಾನಿಗಳು ಚಪ್ಪಾಳೆಯ ಸುರಿಮಳೆಗೈದರು.
ಬಳ್ಳಾರಿಯ ಮೂನ್ ವಾಕರ್ಸ್ ಸಾಂಸ್ಕೃತಿಕ ಕಲಾ ಸಂಘದ ದೇಶಭಕ್ತಿ ಗೀತೆಗಳ ಸಮೂಹ ನೃತ್ಯಕ್ಕೆ ಹಿರಿಯರು- ಕಿರಿಯರೆನ್ನದೇ ಪ್ರತಿಯೊಬ್ಬರು ದೇಶಾಭಿಮಾನದಲ್ಲಿ ಲೀನವಾಗಿದ್ದರು.
ಬಳಿಕ ಬಳ್ಳಾರಿ ತಾಲ್ಲೂಕಿನ ಶಂಕರಬoಡೆ ಗ್ರಾಮದ ಪಿ.ಹೊನ್ನೂರ್‌ಸಾಬ್ ಮತ್ತು ಸಂಗಡಿಗರ “ರಾಮಾಯಣ” ಬಯಲಾಟ ಸನ್ನಿವೇಶಗಳನ್ನು ಪಾತ್ರಧಾರಿಗಳು ಕಲಾ ಪ್ರೇಕ್ಷಕರ ಕಣ್ಣಂಚಿನಲ್ಲಿ ಕಟ್ಟಿದಂತಹ ಅಭಿನಯ ಪಾತ್ರಗಳು ಭರಪೂರ ಮನರಂಜನೆ ನೀಡಿತು.
ಸಾಂಸ್ಕೃತಿಕ ಸೊಬಗು ಸವಿಯಲು ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಅಧಿಕಾರಿಗಳು, ಇಲಾಖೆಯ ಸಿಬ್ಬಂದಿ ಹಾಗೂ ನಗರವಾಸಿಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!