Ad image

ಯುವನಿಧಿ ಯೋಜನೆಗೆ ಅರ್ಹರು ನೋಂದಾಯಿಸಿಕೊಳ್ಳಲು ಮನವಿ

Vijayanagara Vani
ಯುವನಿಧಿ ಯೋಜನೆಗೆ ಅರ್ಹರು ನೋಂದಾಯಿಸಿಕೊಳ್ಳಲು ಮನವಿ

ಬಳ್ಳಾರಿ,ನ.22

- Advertisement -
Ad imageAd image

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.
ಈ ಯೋಜನೆಯಡಿ ಪದವೀಧರರಿಗೆ ರೂ.3000 ಮತ್ತು ಡಿಪ್ಲೋಮಾ ಪದವೀಧರರಿಗೆ ರೂ.1500 ನೀಡಲಾಗುತ್ತದೆ.
ಅರ್ಹರು ಸೇವಾ ಸಿಂಧು ಪೋರ್ಟಲ್, ಅಟಲ್ ಜೀ ಕೇಂದ್ರ, ಕರ್ನಾಟಕ-1, ಬಳ್ಳಾರಿ-1 ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು.
*ಅರ್ಹತೆ:*
2023-24 ನೇ ಸಾಲಿನಲ್ಲಿ ಪದವಿ, ಸ್ನಾತ್ತಕೋತ್ತರ ಅಥವಾ ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ/180 ದಿನಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಅಥವಾ ಸ್ವಯಂ ಉದ್ಯೋಗ ಹೊಂದಿಲ್ಲದವರಾಗಿರಬೇಕು.
ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾ ಅಧ್ಯಯನ ಮಾಡಿದವರು).
*ಬೇಕಾದ ದಾಖಲೆ:*
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಸಂಖ್ಯೆ, ಮೊಬೈಲ್ ನಂಬರ್.
ಪ್ರತಿ ತಿಂಗಳು ಸ್ವಯಂ ದೃಢೀಕೃತ ನಿರುದ್ಯೋಗಿ ಪ್ರಮಾಣ ಪತ್ರವನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ. ತಪ್ಪು ಮಾಹಿತಿ ನೀಡಿದಲ್ಲಿ ದಂಡ ವಿಧಿಸಲಾಗುವುದು.
ನೊಂದಾಯಿಸಿಕೊಳ್ಳಲು ಸೇವಾ ಸಿಂಧು ವೆಬ್ ಪೋರ್ಟಲ್ ವಿಳಾಸ: https://sevasindhugs.karnataka.gov.in ಗೆ ಭೇಟಿ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ: 9742718891, 8277000619, 9900827768, 6360408094, 8861866752 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";