ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

Vijayanagara Vani
ರಾಯಚೂರು,ಜು.02,ಇಲ್ಲಿಯ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವತಿಯಿಂದ 2024-25ನೇ ಸಾಲಿನ ವಿವಿಧ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಸೇವಾ-ಸಿಂಧು ತಂತ್ರಾ0ಶದಡಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಭಾವಚಿತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ್ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ, ವಿಕಲಚೇತನರಿಗೆ ಸಾಧನ-, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟದೋಷ ಹೊಂದಿರುವ ವಿಕಲಚೇತನರಿಗೆ ಬ್ರೆöÊಲ್ ಕಿಟ್ ಯೋಜನೆಗಳಿಗೆ 2024ರ ಆಗಸ್ಟ್ 31ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಜಿಲ್ಲಾ ವ್ಯಾಪ್ತಿಯ ವಿಕಲಚೇತನ ಫಲಾನುಭವಿಗಳು ನಿಗಧಿಸಿಪಡಿಸಿದ ದಿನಾಂಕದೊಳಗಾಗಿ ಗ್ರಾಮಾ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಸೇವಾ ಸಿಂಧು ತಂತ್ರಾAಶದಲ್ಲಿ ಅರ್ಜಿಗಳನ್ನು ಸಲ್ಲಿಸಬಹ್ಮದಾಗಿದೆ. ಆನ್‌ಲೈನ್‌ನಲ್ಲಿ ಸಲ್ಲಿಸಿದ ದಾಖಲಾತಿಗಳೊಂದಿಗೆ ಆಯಾ ತಾಲ್ಲೂಕಿನ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, (ವಿಆರ್‌ಡಬ್ಲೂö್ಯ) ಕಾರ್ಯಕರ್ತರಿಗೆ ಸಲ್ಲಿಸುವುದು. ಹಾಗೂ ನಗರ ಪ್ರದೇಶದಲ್ಲಿ ಪುರಸಭೆ ಹಾಗೂ ನಗರ ಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯುಆರ್‌ಡಬ್ಲೂö್ಯ ಕಾರ್ಯಕರ್ತರಿಗೆ ಸಲ್ಲಿಸುವುದು.
ಈ ಜಿಲ್ಲಾ ವ್ಯಾಪ್ತಿಯ ವಿಕಲಚೇತನ ಫಲಾನುಭವಿಗಳು ಯಾವುದೇ ಅರ್ಜಿಯನ್ನು ನೇರವಾಗಿ ಇಲಾಖೆಗೆ ಸಲ್ಲಿಸಿದ್ದಲ್ಲಿ ಪರಿಗಣಿಸಲಾಗುವುದಿಲ್ಲ. ಇಲಾಖೆಯ ಯಾವುದೇ ಯೋಜನೆಗೆ ಸಂಬ0ಧಿಸಿದ0ತೆ ಸಂಪೂರ್ಣವಾದ ಮಾರ್ಗದರ್ಶನವನ್ನು ಈ ಇಲಾಖೆಯ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ:-08532-200992ಗೆ ಸಂಪರ್ಕಿಸಿ ಮಾಹಿತಿ ಪಡೆದು ಅರ್ಜಿಗಳನ್ನು ಸಲ್ಲಿಸಬಹ್ಮದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!