Ad image

ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರ

Vijayanagara Vani
ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರ
ಚಿತ್ರದುರ್ಗಜುಲೈ.04:
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಯೋಜಕತ್ವದಲ್ಲಿ ಸಿಡಾಕ್ (ಕರ್ನಾಟಕ ಉದಯಮಶೀಲತಾಭಿವೃದ್ಧಿ ಕೇಂದ್ರ ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ಚಿತ್ರದುರ್ಗ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ಒಂದು ದಿನದ “ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರ”ವನ್ನು ಜುಲೈ ತಿಂಗಳ ಕೊನೆಯ ವಾರದಲ್ಲಿ ಚಿತ್ರದುರ್ಗದಲ್ಲಿ ಸಂಘಟಿಸಲು ಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪಿಸ ಬಯಸುವ ಆಸಕ್ತರಿಗೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿಗಳ ಕುರಿತು ಮಾಹಿತಿಯನ್ನು ನೀಡಲಾಗುವುದು. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದು. ಭಾಗವಹಿಸುವವರು ಕನಿಷ್ಠ 18 ವರ್ಷ ಮೇಲ್ಪಟ್ಟ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಾಗಿರಬೇಕು ಹಾಗೂ ಓದಲು, ಬರೆಯಲು ಬರಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 2 ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಆಧಾರ್ ಕಾರ್ಡ್ನ ಪ್ರತಿಯೊಂದಿಗೆ ಸಂಪರ್ಕಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಕರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಮಾಹಿತಿಗಾಗಿ ಸಿಡಾಕ್ ತರಬೇತುದಾರ ಪಿ.ವಿಜಯ್ ಕುಮಾರ್ ಮೊಬೈಲ್ ನಂಬರ್ 7760270058 ಗೆ ಸಂಪರ್ಕಿಸಬಹುದು ಎಂದು ದಾವಣಗೆರೆ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ  
Share This Article
error: Content is protected !!
";