Ad image

ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

Vijayanagara Vani
ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಬಳ್ಳಾರಿ,ಜೂ.27
ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಪ್ರಸ್ತಕ ಸಾಲಿಗೆ 3ನೇ ಸೆಮಿಸ್ಟರ್ 2 ನೇ ವರ್ಷ ಲ್ಯಾಟರಲ್ ಎಂಟ್ರಿ ಡಿಪ್ಲೋಮಾ ಪ್ರವೇಶಕ್ಕೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ನ ಪ್ರಾಚಾರ್ಯರಾದ ಆನಂದ್ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯ ಮೇರೆಗೆ ಅವಧಿ ವಿಸ್ತರಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಜುಲೈ 03 ರವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಜುಲೈ 04 ರಂದು ಪ್ರಕಟಿಸಲಾಗುವುದು. ಜುಲೈ 05 ಮತ್ತು 06 ರಂದು ಸಂದರ್ಶನ ಮತ್ತು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಮೊದಲನೇ ಗೇಟ್ ಹತ್ತಿರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-242228 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";