ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೋಂದಣಿಯ ಅವಧಿ ವಿಸ್ತರಣೆ

Vijayanagara Vani
ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೋಂದಣಿಯ ಅವಧಿ ವಿಸ್ತರಣೆ

ಬಳ್ಳಾರಿ,ಆ.06

ಜಿಲ್ಲೆಯಲ್ಲಿ ಪ್ರಸ್ತಕ ಸಾಲಿನ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (ಆರ್‌ಡಬ್ಲೂö್ಯಬಿಸಿಐಎಸ್) ಯ ನೋಂದಣಿ ಪ್ರಕ್ರಿಯೆಯನ್ನು ಆ.16 ರ ವರೆಗೆ ವಿಸ್ತರಿಸಲಾಗಿದ್ದು, ಅರ್ಹ ರೈತರು ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ ಸಪ್ಪಂಡಿ ಅವರು ತಿಳಿಸಿದ್ದಾರೆ.

ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ ಮತ್ತು ಬೆಳೆ ಮುಳುಗಡೆ, ಗುಡುಗು ಮಿಂಚುಗಳಿ0ದ ಬೆಳೆಗಳಿಗೆ ಬೆಂಕಿ ಅವಘಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ನಷ್ಟದ ಪರಿಹಾರ ನೀಡಲಾಗುವುದು.

ವಿಮಾ ಕಂಪನಿ: ಕೆಎಸ್‌ಹೆಚ್‌ಎಂಎ ವಿಮಾ ಕಂಪನಿಯಾಗಿದ್ದು, ದಾಳಿಂಬೆ ಬೆಳೆ ವಿಮಾ ಯೋಜನೆಯಡಿ ಒಳಪಡುವ ಬೆಳೆಯಾಗಿದೆ.

ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲ್ಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ 1 ಲಕ್ಷ 27 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.6,350 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಕಂಪ್ಲಿ ಮತ್ತು ಕುರುಗೋಡು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ: 08392-278177 ಹಾಗೂ ಮೊ.9481305830, ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ:08395-260389 ಹಾಗೂ ಮೊ.9740934208, ಕಂಪ್ಲಿ ಮತ್ತು ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಪಂ) ದೂ:08396-222066 ಹಾಗೂ ಮೊ.9916794371 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

WhatsApp Group Join Now
Telegram Group Join Now
Share This Article
error: Content is protected !!