Ad image

ಗಯಾನ ದೇಶದಲ್ಲಿ ಮೃತಪಟ್ಟ ಅನಿವಾಸಿ ಭಾರತೀಯನ ಮೃತದೇಹ ಭಾರತಕ್ಕೆ ಕರೆತರಲು ಕರ್ನಾಟಕ ಸರ್ಕಾರದಿಂದ ಆರ್ಥಿಕ ಸಹಾಯ

Vijayanagara Vani
ಚಿತ್ರದುರ್ಗಜುಲೈ25
ಗಯಾನ ದೇಶದಲ್ಲಿ ಮೃತಪಟ್ಟ ಅನಿವಾಸಿ ಭಾರತೀಯ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ನಿವಾಸಿ ಪಿ.ಬಿ.ಗಿರೀಶ ಬಾಬು ಪಾಲೆ ಅವರ ಮೃತದೇಹ ತರಲು ರಾಜ್ಯ ಸರ್ಕಾರವು ರೂ.3.60 ಲಕ್ಷ ನೆರವು ನೀಡಿದೆ.
ಪಿ.ಬಿ ಗಿರೀಶ ಬಾಬು ಪಾಲೆ ರವರು ದಕ್ಷಿಣ ಅಮೆರಿಕಾದ ಗಯಾನಾ ದೇಶದ ಶೆರಿಫ್ ಜನರಲ್ ಆಸ್ಪತ್ರೆಯಲ್ಲಿ ಸ್ಟಾಫ್ನರ್ಸ್ ಆಗಿ ಸುಮಾರು ಎರಡು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಜುಲೈ 03ರಂದು ಅನಾರೋಗ್ಯ ಕಾರಣದಿಂದ ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಪಿ.ಬಿ ಗಿರೀಶ ಬಾಬು ಪಾಲೆ ಅವರು ಬಹು ಅನಿಯಮಿತ ರಕ್ತಸ್ರಾವದ ಹೃದಯಘಾತದಿಂದ ಜುಲೈ14ರಂದು ಸಾವನ್ನಪ್ಪಿರುತ್ತಾರೆ. ಆನಂತರ, ಅನಿವಾಸಿ ಭಾರತೀಯ ಸಮಿತಿಯು ಆಸ್ಪತ್ರೆ ಹಾಗೂ ಭಾರತೀಯ ರಾಯಭಾರಿ ಕಛೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪಿ.ಬಿ ಗಿರೀಶ ಬಾಬು ಪಾಲೆ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಕರೆತರುವ ಕಾರ್ಯವನ್ನು ಪ್ರಾರಂಭಿಸಲಾಯಿತು.
ಮೃತನ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸುಮಾರು ರೂ.12 ಲಕ್ಷ ಗಳಾಗಬಹುದೆಂದು ರಾಯಭಾರಿ ಕಛೇರಿ ತಿಳಿಸಿದ್ದು, ಜಾನಕಿ ಕೆ.ಎನ್. W/o ಪಿ.ಬಿ ಗಿರೀಶ ಬಾಬು ಪಾಲೆ ಅವರು ತಮಗೆ 2 ವರ್ಷದ ಒಬ್ಬ ಮಗನಿದ್ದು ಹಾಗೂ ಕುಟುಂಬವು ಆರ್ಥಿಕವಾಗಿ ಹಿಂದುಳಿದಿದ್ದು, ಸರ್ಕಾರದ ವತಿಯಿಂದ ಸಹಾಯಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರಂತೆ, ಅನಿವಾಸಿ ಭಾರತೀಯ ಸಮಿತಿಯಿಂದ ಪಿ.ಬಿ ಗಿರೀಶ ಬಾಬು ಅವರ ಮೃತ ದೇಹವನ್ನು ಭಾರತಕ್ಕೆ ಕರೆತರಲು ತಗಲುವ ವೆಚ್ಚವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಧನ ಸಹಾಯ ಮಾಡಲು ಮುಖ್ಯಮಂತ್ರಿಗಳಿಗೆ ಕೋರಲಾಗಿತ್ತು.
ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ಮುಖ್ಯಮಂತ್ರಿಯವರ ಜೊತೆ ಈ ವಿಚಾರವಾಗಿ ಚರ್ಚಿಸಿರುತ್ತಾರೆ. ಈ ಎಲ್ಲಾ ಮನವಿಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರದ ವತಿಯಿಂದ ರೂ 3,60,000/- (ಮೂರು ಲಕ್ಷ ಅರವತ್ತು ಸಾವಿರ ಮಾತ್ರ)ಗಳನ್ನು ಮಂಜೂರು ಮಾಡಿರುತ್ತಾರೆ. ಉಳಿಕೆ ಹಣವನ್ನು ಪಿ.ಬಿ ಗಿರೀಶ ಬಾಬು ಪಾಲೆ ಅವರು ಕೆಲಸ ಮಾಡುತ್ತಿದ್ದ ಶೆರಿಫ್ ಜನರಲ್ ಆಸ್ಪತ್ರೆಯವರು ಭರಿಸಲಿದ್ದಾರೆ.
ಗಯಾನದಲ್ಲಿರುವ ಭಾರತೀಯ ರಾಯಭಾರಿ ಕಛೇರಿ ಹಾಗೂ ನವ ದೆಹಲಿಯಲ್ಲಿರುವ ನಿವಾಸಿ ಆಯುಕ್ತರು ಮೃತದೇಹವನ್ನು ಭಾರತಕ್ಕೆ ತರಲಾಗುವುದು ಎಂದು ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";