Ad image

ಆಗಸ್ಟ್ 20 ರಂದು, ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜ ಅರಸು ದಿನಾಚರಣೆ.

Vijayanagara Vani
ಆಗಸ್ಟ್ 20 ರಂದು, ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜ ಅರಸು ದಿನಾಚರಣೆ.

ಧಾರವಾಡ ಜಿಲ್ಲಾಡಳಿತ, ಜಿಲ್ಲಾಪಂಚಾಯತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪ್ರಗತಿಪರ ಸಾಧನೆಗಳ ಸರದಾರ, ಸಾಮಾಜಿಕ ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಡಿ.ದೇವರಾಜ ಅರಸು ಅರಸು 109 ನೇ ಜನ್ಮದಿನಾಚರಣೆ ಸಮಾರಂಭ ಕಾರ್ಯಕ್ರಮವನ್ನು ಆಗಸ್ಟ್ 20 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿದೆ.

- Advertisement -
Ad image

ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. ಕಾರ್ಮಿಕ ಇಲಾಖೆ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವ ತಂಗಡಗಿ ಶಿವರಾಜ ಸಂಗಪ್ಪ ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ.ಎನ್.ಗಣೇಶ, ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ರಾಮಪ್ಪ ಕೆ. ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಅವರು ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಡಾ.ಗೋಪಾಲ ಎಂ. ಬ್ಯಾಕೋಡ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರು ಭಾಗವಹಿಸುವರು.

ಗೊಟಗೋಡಿಯ ಕರ್ನಾಟಕ ಜನಪದ ವಿಶ್ವವಿದ್ಯಲಯದ ಸಹಾಯಕ ಪ್ರಾಧ್ಯಾಪಕ ಡಾ.ನಾಗರಾಜ.ಎಸ್ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುವರು ಎಂದು ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";