ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ದ ವತಿಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಚಿಸುವವರಿಗಾಗಿ 1 ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ನೋಂದಾಯಿಸಿಕೊಳ್ಳಬಹುದು.
ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮ, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ. ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಬಹುದು.
ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು. ಓದಲು, ಬರೆಯಲು ಬರುತ್ತಿರಬೇಕು. ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿ ಕಟ್ಟಡದ ಸಿಡಾಕ್ನ ಜಂಟಿ ನಿರ್ದೇಶಕರ ಕಚೇರಿಈ ಕೆಳಕಂಡ ವಿಳಾಸದಲ್ಲಿ ಕಛೇರಿ ವೇಳೆಯಲ್ಲಿ ಪಡೆಯಬಹುದಾಗಿದೆ ಅಥವಾ ಮೊ.7483538942, 9449226221 ಕರೆ ಮಾಡಿ ನೋಂದಾಯಿಸಿಕೊಳ್ಳಬಹುದು. ನೋಂದಾಯಿಸಿಕೊಳ್ಳಲು ಜು.12 ಕೊನೆಯ ದಿನವಾಗಿದೆ ಎಂದು ಸಿಡಾಕ್ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ