Ad image

ಜಿ.ಪಂ.ಕಾರ್ಯದರ್ಶಿ ಕೆ.ತಿಮ್ಮಪ್ಪ ಸೂಚನೆ ಪ್ರತಿ ತಿಂಗಳು ಕುಡಿಯುವ ನೀರಿನ ಮಾದರಿ ಪರೀಕ್ಷೆ ಕಡ್ಡಾಯ

Vijayanagara Vani
ಜಿ.ಪಂ.ಕಾರ್ಯದರ್ಶಿ ಕೆ.ತಿಮ್ಮಪ್ಪ ಸೂಚನೆ ಪ್ರತಿ ತಿಂಗಳು ಕುಡಿಯುವ ನೀರಿನ ಮಾದರಿ ಪರೀಕ್ಷೆ ಕಡ್ಡಾಯ
ಚಿತ್ರದುರ್ಗ 5: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರತಿ ತಿಂಗಳು ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಈ ಪರೀಕ್ಷೆಯ ವರದಿಯನ್ನು ತಪ್ಪದೇ ಡಬ್ಲೂö.ಕ್ಯೂ.ಎಂ.ಐ.ಎಸ್ ಪೋರ್ಟಲ್ ಅಲ್ಲಿ ಇಂಧರೀಕರಿಸಬೇಕು ಎಂದು ಜಿ.ಪಂ.ಕಾರ್ಯದರ್ಶಿ ಕೆ.ತಿಮ್ಮಪ್ಪ ಸೂಚನೆ ನೀಡಿದರು.
ನಗರದ ಜಿ.ಪಂ. ಸಭಾಂಗಣದಲ್ಲಿ ಗುರುವಾರ, ಜಿ.ಪಂ. ಹಾಗೂ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ ಸಹಯೋಗದಲ್ಲಿ ಚಿತ್ರದುರ್ಗ ಮತ್ತು ಹಿರಿಯೂರು ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಫೀಲ್ಡ್ ಟೆಸ್ಟ್ ಕಿಟ್ ಮತ್ತು ಹೆಚ್2ಎಸ್ ವೈಲ್ಸ್ ಉಪಯೋಗಿಸಿ ನೀರು ಪರೀಕ್ಷೆ ಕೈಗೊಳ್ಳುವುದರ ಕುರಿತು ಆಯೋಜಿಸಲಾದ ತರಭೇತಿ ಕಾರ್ಯಕ್ರಮ ಉದ್ಘಾಟಿಸಿ ಮಾನತನಾಡಿದರು. .
ಪ್ರತಿ ಗ್ರಾಮದಲ್ಲಿ ಕುಡಿಯುವ ನೀರಿನ ಜಲ ಮೂಲಗಳಿಂದ ನೀರನ್ನು ಸಂಗ್ರಹಿಸಿ ಪ್ರತಿ ತಿಂಗಳು ನೀರಿನ ಮಾದರಿಯನ್ನು ಪರೀಕ್ಷಿಸಿಬೇಕು. ಗ್ರಾಮದಲ್ಲಿ ನೀರುಗಂಟಿ ಮೂಲಕ ಪೈಪ್ ಲೈನ್ ಹೊಡೆದು ಹೋಗಿದ್ದರೆ ಕೂಡಲೇ ಗುರುತಿಸಿ ಸರಿಪಡಿಸಿ ನೀರು ಸರಬರಾಜು ಮಾಡಬೇಕು. ಗ್ರಾಮಗಳಲ್ಲಿನ ಓವರ್ ಹೆಡ್ ಟ್ಯಾಂಕ್, ಆರ್.ಓ.ಪ್ಲಾಂಟ್, ಮಿನಿ ಟ್ಯಾಂಕ್ ಹಾಗೂ ಜಲ ಮೂಲಗಳ ಸ್ವಚ್ಛಗೊಳಿಸಿ ಜಾಗೃತ ವಹಿಸಬೇಕು. ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳು ಪುನರ್ ರಚನೆ ಮಾಡಿ ನಮೂನೆಗಳನ್ನು ಕಡ್ಡಾಯವಾಗಿ ಜಿಲ್ಲಾ ಪಂಚಾಯತ್ ಕಛೇರಿಗೆ ಸಲ್ಲಿಸಬೇಕು. ಈ ಸಮಿತಿ ಸದಸ್ಯರ ಸಹಕಾರದಿಂದ ನೀರು ಮತ್ತು ನೈರ್ಮಲ್ಯಕ್ಕೆ ಸಂಬAಧಿಸಿದAತೆ 3 ತಿಂಗಳಿಗೊಮ್ಮೆ ಚರ್ಚಿಸಿ ಸಭಾ ನಡವಳಿಯನ್ನು ರಿಜಿಸ್ಟರ್ ಪುಸ್ತಕದಲ್ಲಿ ನಮೂದಿಸಲು ತಿಳಿಸಿದರು.
ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್ ಮಾತನಾಡಿ, ಚಿತ್ರದುರ್ಗ ಮತ್ತು ಹಿರಿಯೂರು ತಾಲ್ಲೂಕುಗಳ ಜಲ ಜೀವನ್ ಮಿಷನ್ ಯೋಜನೆಯ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳ ಕುರಿತು ಮಾಹಿತಿ ನೀಡಿ ಇಂಜಿನಿಯರ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಮನ್ವಯದೊಂದಿಗೆ ಗ್ರಾಮಸ್ಥರಿಗೆ ಶುದ್ದ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಒದಗಿಸಬೇಕು. ನೀರುನ್ನು ಮಿತವಾಗಿ ಬಳಸಲು ಸಾರ್ವಜನಿಕರಿಗೆ ಮಾಹಿತಿಯನ್ನು ತಿಳಿಸಬೇಕು. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸ ಬೇಕು. ಗ್ರಾ.ಪಂ.ಗಳು ಕಡ್ಡಾಯವಾಗಿ ಕ್ಷೇತ್ರ ಪರೀಕ್ಷಾ ಕಿಟ್ ಗಳನ್ನು ಬಳಸಿಕೊಳ್ಳಲು ತಿಳಿಸಿದರು.
ತರಬೇತಿಯಲ್ಲಿ ನೀರು ಪರೀಕ್ಷೆ ಪ್ರಯೋಗ ಕುರಿತು ಮಾಹಿತಿ ನೀಡಿ ಪ್ರಾತ್ಯಕ್ಷತೆ ನಡೆಸಿಕೊಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಶ್ರೀ.ಮಂಜುನಾಥ್.ಎಸ್.ನಾಡರ್, ಜಿಲ್ಲಾ ಸಮಾಲೋಚಕ ಸ್ನೇಹನ್, ಬಿ.ಸಿ.ನಾಗರಾಜು, ಲ್ಯಾಬ್ ಸಿಬ್ಬಂದಿ ಹಾಜರಿದ್ದರು.
Share This Article
error: Content is protected !!
";