ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಗೌಸಿಯಾ ಬೇಗಂ

Vijayanagara Vani
ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಗೌಸಿಯಾ ಬೇಗಂ
ಬಳ್ಳಾರಿ,ಜೂ.24
ಜಿಲ್ಲಾಡಳಿತದಿಂದ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರರಾದ ಗೌಸಿಯಾ ಬೇಗಂ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತು ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂನ್ 27 ರಂದು ಕೆಂಪೇಗೌಡ ಜಯಂತಿ, ಜುಲೈ 02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ನಗರದ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಸಾಂಕೇತಿಕವಾಗಿ ಆಚರಿಸಲಾಗುವುದು. ಆಹ್ವಾನ ಪತ್ರಿಕೆಗಳನ್ನು ಶಿಷ್ಠಾಚಾರದಂತೆ ಮುದ್ರಿಸಿ ಆಹ್ವಾನ ನೀಡಬೇಕು ಎಂದರು.
ಕೆಂಪೇಗೌಡರ ಜಯಂತಿಯನ್ನು ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕು ಎಂದು ಸರ್ಕಾರವು ಆದೇಶಿಸಿದ್ದು, ತಾಲ್ಲೂಕು ಮಟ್ಟದ ಶಾಲೆಗಳಲ್ಲಿ ಕೆಂಪೇಗೌಡರ ಕುರಿತಾಗಿ ಪ್ರಬಂಧ, ಭಾಷಣ, ವಿಚಾರಗೋಷ್ಠಿ ಮತ್ತು ಜಾಥಾ ಕಾರ್ಯಕ್ರಮ ಆಯೋಜಿಸುವಂತೆ ಸರ್ಕಾರದ ನಿರ್ದೇಶನವಿದ್ದು, ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಡಿಡಿಪಿಐ ಅವರಿಗೆ ನಿರ್ದೇಶನ ನೀಡಿದರು.
ಮಹನೀಯರ ವಿಚಾರಧಾರೆಗಳನ್ನು ಇಂದಿನ ಪೀಳಿಗೆಗೆ ತಿಳಿಯಪಡಿಸಲು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು. ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!