Ad image

ಗೌತಮ್ ಗಂಭೀರ್ ಟೀಂ ಇಂಡಿಯಾ ನೂತನ ತರಬೇತುದಾರ

Vijayanagara Vani
ಗೌತಮ್ ಗಂಭೀರ್ ಟೀಂ ಇಂಡಿಯಾ ನೂತನ ತರಬೇತುದಾರ

ಮುಂಬೈ, 8 : ನಿರೀಕ್ಷೆಯಂತೆ ಭಾರತೀಯ ಕ್ರಿಕೆಟ್ ತಂಡದ ನೂತನ ತರಬೇತುದಾರರಾಗಿ ಮಾಜಿ ಬ್ಯಾಟ‌ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಮ್ಮ ಎಕ್ಸ್ ಖಾತೆಯಲ್ಲಿ ಅಧಿಕೃತವಾಗಿ ಈ ಮಾಹಿತಿ ಹಂಚಿಕೊಂಡಿದ್ದಾರೆ.
ಟೀಂ ಇಂಡಿಯಾದ ನೂತನ ಕೋಚ್ ಗೌತಮ್ ಗಂಭೀರ್ ಅವರನ್ನು ನಾನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಆಧುನಿಕ ಕ್ರಿಕೆಟ್ ಬಹಳ ವೇಗವಾಗಿ ಬದಲಾಗುತ್ತಿದ್ದು ಗೌತಮ್ ಅವರು ಈ ಬದಲಾವಣೆಯನ್ನು ಬಹಳ ಹತ್ತಿರದಿಂದ ಗಮನಿಸಿದ್ದಾರೆ ಎಂದು ಹೇಳಿದ್ದಾರೆ.
ಗಂಭೀರ್ ಅವರು ತಮ್ಮ ವೃತ್ತಿ ಜೀವನದಲ್ಲಿ ಹಲವು ಪ್ರಮುಖ ಪಾತ್ರಗಳನ್ನು ನಿರ್ಬಹಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಆದ್ದರಿಂದ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಲು ಅರ್ಹ ವ್ಯಕ್ತಿಯಾಗಿದ್ದಾರೆ ಎಂದು ಶಾ ವ್ಯಕ್ತಪಡಿಸಿದ್ದಾರೆ.
ಹೊಸ ಇನ್ನಿಂಗ್ಸ್ ಆರಂಭಿಸುತ್ತಿರುವ ಗಂಭೀರ್ ಅವರಿಗೆ ಬಿಸಿಸಿಐ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಟೀಂ ಇಂಡಿಯಾಕ್ಕಾಗಿ 2 ಬಾರಿ ವಿಶ್ವಕಪ್ ಗೆದ್ದುಕೊಟ್ಟಿರುವ ಗೌತಮ್ ಗಂಭೀರ್ ಕೋಚಿಂಗ್‌ನಲ್ಲೂ ಅನುಭವ ಹೊಂದಿದ್ದಾರೆ. 2022-23ರಲ್ಲಿ ಲಕ್ಷ್ಮೀ ಸೂಪರ್ ಜೈಂಟ್ ತಂಡದ ಮೆಂಟರ್ ಆಗಿ ಕೆಲಸ ಮಾಡಿದ್ದ ಗಂಭೀರ್, ತಂಡವನ್ನು ಸತತ ಎರಡು ಬಾರಿ ಪ್ಲೇ ಆಫ್ ಪ್ರವೇಶಿಸುವಂತೆ ಮಾಡಿದ್ದರು.
ಗಂಭೀರ್ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡದ ಮುಖ್ಯಕೋಚ್ ಆಗಿದ್ದು, ಇವರ ನೇತೃತ್ವದಲ್ಲಿ ಕೆಕೆಆರ್ ಸಹ ಪ್ಲೇ ಆಫ್ ಪ್ರವೇಶಿಸಿದೆ. ಆದರೆ ದೇಶೀಯ ಅಥವಾ ಅಂತಾರಾಷ್ಟ್ರೀಯ ತಂಡಗಳಿಗೆ ತರಬೇತಿ ನೀಡಿದ ಅನುಭವ ಗಂಭೀರ್ ಅವರಿಗಿಲ್ಲ. ಆದರೂ ಹೊಸ ಜವಾಬ್ದಾರಿ ಗಂಭೀರ್ ಸವಾಲಾಗಿ ಪರಿಣಮಿಸಿದೆ.
ಟಿ20 ವಿಶ್ವಕಪ್ ಟೂರ್ನಿ ಬಳಿಕ ದ್ರಾವಿಡ್ ಅವರ ಮುಖ್ಯಕೋಚ್ ಹುದ್ದೆಯ ಅವಧಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು.
ದ್ರಾವಿಡ್ ಸಾರಥ್ಯದಲ್ಲಿ ಇತ್ತೀಚೆಗೆ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಆತಿಥ್ಯದಲ್ಲಿ ನಡೆದ ಟಿ.20 ವಿಶ್ವ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ರೋಹಿತ್‌ ಪಡೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

- Advertisement -
Ad imageAd image
Share This Article
error: Content is protected !!
";