ಧಾರವಾಡಮಾರ್ಚ್ 03: ದ್ವಿತೀಯ ಪಿಯುಸಿ ಪರೀಕ್ಷೆ ಸುಗಮವಾಗಿ ನಡೆಯುತ್ತಿರುವ ಬಗ್ಗೆ ನಗರದ ಕಿಟಲ್ ವಿಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ಆರ್.ಎಲ್.ಎಸ್ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಮಾ.03) ಬೆಳಿಗ್ಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭುವನೇಶ ಪಾಟೀಲ ಅವರು ಭೇಟಿ ನೀಡಿ, ಪರಿಶೀಲಿಸಿದರು.
ಪರೀಕ್ಷಾ ಪ್ರಕ್ರಿಯೆ ನಿರ್ವಹಣೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸುತ್ತಿರುವುದನ್ನು ವೀಕ್ಷಿಸಿದರು.
ಪರೀಕ್ಷೆಗಳ ಕುರಿತಾಗಿ ನಿಯೋಜಿತ ಪರೀಕ್ಷಾ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು.
ಪರೀಕ್ಷಾ ಹಾಜರಾತಿ: ದ್ವಿತೀಯ ಪಿಯುಸಿ ಗಣಿತ ಪರೀಕ್ಷೆಗೆ ಒಟ್ಟು 12,755 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 12755 ವಿದ್ಯಾರ್ಥಿಗಳು ಇಂದು ನಡೆದ ಪರೀಕ್ಷೆಗೆ ಹಾಜರಾಗಿದ್ದರು, 83 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಒಟ್ಟಾರೆ ನೋಂದಾಯಿತ ವಿದ್ಯಾರ್ಥಿಗಳಲ್ಲಿ ಶೇ. 99.35 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ವ್ಯವಹಾರ ಅಧ್ಯಯನ ಪರೀಕ್ಷೆಗೆ ಒಟ್ಟು 7,493 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 7,289 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, 204 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಒಟ್ಟಾರೆ ನೋಂದಾಯಿತ ವಿದ್ಯಾರ್ಥಿಗಳಲ್ಲಿ ಶೇ. 97.27 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಶಿಕ್ಷಣಶಾಸ್ತ್ರ ಪರೀಕ್ಷೆಗೆ ಒಟ್ಟು 1,299 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 1,253 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, 46 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಒಟ್ಟಾರೆ ನೋಂದಾಯಿತ ವಿದ್ಯಾರ್ಥಿಗಳಲ್ಲಿ ಶೇ. 96.45 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.