ಉಪ ಲೋಕಾಯುಕ್ತರಿಂದ ದೂರುಗಳ ವಿಚಾರಣೆ; 87 ವಿವಿಧ ಬಗೆಯ ಪ್ರಕರಣ ಇತ್ಯರ್ಥ ಇನ್ನುಳಿದವು ಕಾಲಮಿತಿಯಲ್ಲಿ ಪ್ರಕರಣ ವಿಲೇವಾರಿ: ನ್ಯಾ.ಬಿ.ವೀರಪ್ಪ

Vijayanagara Vani
ಉಪ ಲೋಕಾಯುಕ್ತರಿಂದ ದೂರುಗಳ ವಿಚಾರಣೆ; 87 ವಿವಿಧ ಬಗೆಯ ಪ್ರಕರಣ ಇತ್ಯರ್ಥ ಇನ್ನುಳಿದವು ಕಾಲಮಿತಿಯಲ್ಲಿ ಪ್ರಕರಣ ವಿಲೇವಾರಿ: ನ್ಯಾ.ಬಿ.ವೀರಪ್ಪ
ಬಳ್ಳಾರಿ,ಜ.18
ಉಪ ಲೋಕಾಯುಕ್ತ ಕಾರ್ಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ಒಟ್ಟು 274 ಪ್ರಕರಣಗಳಲ್ಲಿ 87 ವಿವಿಧ ಬಗೆಯ ಹಲವು ಪ್ರಕರಣಗಳನ್ನು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿ ಇತ್ಯರ್ಥ ಪಡಿಸಲಾಗಿದೆ ಎಂದಯ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಹೇಳಿದರು.
ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಎರಡು ದಿನಗಳ ದೂರು/ಅಹವಾಲು ಸ್ವೀಕಾರ ಮತ್ತು ವಿಚಾರಣೆಯಲ್ಲಿ 177 ಹೊಸ ದೂರುಗಳ ವಿಚಾರಣೆ ಕೈಗೊಳ್ಳಲಾಗಿತ್ತು. ಅದರಲ್ಲಿ 68 ದೂರುಗಳನ್ನು ವಿಲೇವಾರಿಗೊಳಿಸಲಾಗಿದೆ. 97 ಬಾಕಿ ಇರುವ ದೂರುಗಳ ವಿಚಾರಣೆಯಲ್ಲಿ 19 ದೂರು ಇತ್ಯರ್ಥ ಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಉಪ ಲೋಕಾಯುಕ್ತ ವ್ಯಾಪ್ತಿಗೆ ಸಲ್ಲಿಕೆಯಾಗಿರುವ ದೂರುಗಳ ಸಂಬoಧ ಸಮಸ್ಯೆಗಳಿಗೆ ಕಲ್ಪಿಸುವುದು ಲೋಕಾಯುಕ್ತದ ಉದ್ದೇಶವಾಗಿದೆ ಎಂದು ತಿಳಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಜ.16 ರಿಂದ 18 ರವರೆಗೆ ಮೂರು ದಿನಗಳ ಕಾಲ ವಿವಿಧೆಡೆ ಅನೀರಿಕ್ಷಿತ ಭೇಟಿ ನಡೆಸಿ ಅಲ್ಲಿನ ಸ್ಥಿತಿ-ಗತಿ ಪರಿಶೀಲನೆ ನಡೆಸಿ ಸೂಕ್ತ ಸಲಹೆ-ಸೂಚನೆಗಳನ್ನು ಸಂಬoಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದರು.
ಗುರುವಾರ (ಜ.16 ರಂದು) ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಯಾರ್ಡ್ (ಎಪಿಎಂಸಿ), ವೇಣಿವೀರಾಪುರ ಗ್ರಾಮದ ಬಳಿಯ ಘನ ತ್ಯಾಜ್ಯ ವಿಲೇವಾರಿ ಘಟಕ, ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ, ಬಳ್ಳಾರಿ ತಾಲ್ಲೂಕು ಕಚೇರಿ, ಜಿಲ್ಲಾ ಆಸ್ಪತ್ರೆ, 100 ಹಾಸಿಗೆಗಳ ತಾಯಿ ಮತ್ತು ನವಜಾತ ಶಿಶುಗಳ ಆಸ್ಪತ್ರೆ, ವಿಮ್ಸ್ ಆಸ್ಪತ್ರೆ, ಪ್ರಾದೇಶಿಕ ಸಾರಿಗೆ ಕಚೇರಿ, ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿ-ಗತಿ ಪರಿಶೀಲನೆ ನಡೆಸಲಾಗಿದೆ ಎಂದರು.
ಶುಕ್ರವಾರ (ಜ.17 ರಂದು) ನಗರದ ಅನಂತಪುರ ರಸ್ತೆಯ 30 ಎಂಎಲ್‌ಡಿ ಎಸ್.ಟಿ.ಪಿ 7 ನೇ ಹಂತ ಪ್ರೆöÊಮರಿ ಟ್ರೀಟ್‌ಮೆಂಟ್, ಮುಂಡರಿಗಿಯ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ವಲಯ, ಬಂಡಿಮೋಟ್‌ನ ಕರ್ನಾಟಕ ಆಹಾರ ಉಗ್ರಾಣ ನಿಗಮದ ದಾಸ್ತಾನು ಉಗ್ರಾಣ ಘಟಕ-2 ಭೇಟಿ ನೀಡಲಾಯಿತು ಎಂದರು.
ಶನಿವಾರ (ಜ.18 ರಂದು) ನಗರದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ವಸತಿ ಶಾಲೆ, ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ-2, ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಮೂಲ ಸೌಕರ್ಯಗಳು ಒದಗಿಸುವಂತೆ ಸೂಚಿಸಲಾಗಿದೆ ಎಂದರು.
ಈ ವೇಳೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭರಾಣಿ ವಿ.ಜೆ., ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಸಹಾಯಕ ನಿಬಂಧಕರಾದ ಶುಭವೀರ್ ಜೈನ್.ಬಿ., ಉಪ ನಿಬಂಧಕರಾದ ಅರವಿಂದ.ಎನ್.ವಿ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಯೂ ಆದ ರಾಜೇಶ್ ಎನ್.ಹೊಸಮನೆ, ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಸೇರಿದಂತೆ ಮತ್ತಿತರರು ಇದ್ದರು.
Share This Article
error: Content is protected !!
";