: ನಟ ದರ್ಶನ್ ಅರೆಸ್ಟ್ ಆಗಿದ್ದು ಯಾಕೆ? ಏನಿದು ಪ್ರಕರಣ? ಇಲ್ಲಿದೆ ಶಾಕಿಂಗ್ ಮಾಹಿತಿ!

Vijayanagara Vani
: ನಟ ದರ್ಶನ್ ಅರೆಸ್ಟ್ ಆಗಿದ್ದು ಯಾಕೆ? ಏನಿದು ಪ್ರಕರಣ? ಇಲ್ಲಿದೆ ಶಾಕಿಂಗ್ ಮಾಹಿತಿ!

 ನಟ ದರ್ಶನ್ ಬಂಧನ
ಬೆಂಗಳೂರು, ಜೂನ್.11: ಆಪ್ತೆ ಪವಿತ್ರಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ಕೊಲೆ ಮಾಡಲು ಸುಪಾರಿ ನೀಡಿದ್ದರು ಎಂಬ ಕಾರಣಕ್ಕೆ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅವರನ್ನು ಬಂಧನ ಮಾಡಲಾಗಿದೆ. ವಿಜಯನಗರ ಎಸಿಪಿ ಚಂದನ್​ ತಂಡ ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲೇ ಬೆಂಗಳೂರಿನ ನಟ ದರ್ಶನ್​ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್​ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಫ್ಯಾನ್ಸ್​ಗಳಿಂದ ಏನಾದ್ರು ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಸದ್ಯ ದರ್ಶನ್ ಮನೆ ಬಳಿ ಯಾರು ಕೂಡ ಇಲ್ಲ ಎಂದು ತಿಳಿದುಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ. ಈ ಹಿನ್ನೆಲೆ ನಟ ದರ್ಶನ್, ಚಿತ್ರದುರ್ಗದ ದರ್ಶನ್ ಫ್ಯಾನ್ ಸಂಘಟನೆ ಅಧ್ಯಕ್ಷನಿಗೆ ಫೋನ್ ಕಾಲ್ ಮಾಡಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನ ಕರೆತರುವಂತೆ ಹೇಳಿದ್ದರು.
ಬೆಂಗಳೂರಿಗೆ ರೇಣುಕಾಸ್ವಾಮಿ ಕರೆದುಕೊಂಡು ಬಂದು ವಿನಯ್ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಇರಿಸಿದ್ದರು. ರೇಣುಕಾಸ್ವಾಮಿಗೆ ದರ್ಶನ್ ಸೇರಿ 4 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲ್ಲೆ ಬಳಿಕ ರೇಣುಕಾಸ್ವಾಮಿಗೆ ಬಲವಾದ ಆಯುಧದಿಂದ ಶೆಡ್​ನಲ್ಲೇ ಹಲ್ಲೆ ಮಾಡಿ ಜೂನ್​ 8ರ ಶನಿವಾರ ರಾತ್ರಿ ಕೊಲೆ ಮಾಡಲಾಗಿದೆ. ನಂತರ ಕಾಮಾಕ್ಷಿ ಪಾಳ್ಯದ ಮೋರಿಯಲ್ಲಿ ಮೃತದೇಹ ಎಸೆಯಲಾಗಿದೆ. ಭಾನುವಾರ ಬೆಳಗಿನ ಜಾವ ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿತ್ತು.
ರೇಣುಕಾಸ್ವಾಮಿ ಶವವನ್ನ ನಾಯಿಗಳು ಎಳೆಯುತ್ತಿದ್ದಾಗ ಮೃತದೇಹ ಪತ್ತೆಯಾಗಿತ್ತು. ಸದ್ಯ ಕಾಮಾಕ್ಷಿ ಪಾಳ್ಯ ಸ್ಟೇಷನ್​ಗೆ ರೇಣುಕಾಸ್ವಾಮಿ ಪೋಷಕರು ಆಗಮಿಸಿದ್ದು ಕಣ್ಣೀರಿಟ್ಟಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!