ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದಾರೆ. ನಿಗದಿಗಿಂತ 2 ಕೆ,ಜಿ ಹೆಚ್ಚಿದ್ದ ವಿನೇಶ್, ತೂಕ ಇಳಿಸಿಕೊಳ್ಳಲು ಸೈಕ್ಲಿಂಗ್, ಸ್ಕಿಪ್ಪಿಂಗ್ ಮೊರೆ ಹೋಗಿದ್ದಾರೆ. ಅಷ್ಟೇ ಅಲ್ಲ, ತೂಕ ಇಳಿಸುವ ಸಲುವಾಗಿ ವಿನೇಶ್ ತನ್ನ ತಲೆ ಕೂದಲು ಮತ್ತು ಉಗುರುಗಳನ್ನು ಸಹ ಕತ್ತರಿಸಿದ್ದಾರೆ. ಇದು ಸಾಲದೆಂಬಂತೆ ತನ್ನ ದೇಹದ ರಕ್ತವನ್ನು ಸಹ ಹೊರತೆಗೆಸಿದ್ದಾರೆ.
ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದಾರೆ. ಮಂಗಳವಾರ ರಾತ್ರಿ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು ಸೋಲಿಸಿ 50 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್‌ಗೆ ತಲುಪಿದ್ದ ವಿನೇಶ್ ಫೋಗಟ್ ನಿಗದಿತ ತೂಕದ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಲಾಗಿದೆ.
ಮಾಹಿತಿಯ ಪ್ರಕಾರ, ಮಂಗಳವಾರ ರಾತ್ರಿ ಪರೀಕ್ಷಿಸಿದಾಗ ವಿನೇಶ್ ಫೋಗಟ್ ಅವರ ತೂಕ 2 ಕೆಜಿ ಹೆಚ್ಚಿತ್ತು. ಹೀಗಾಗಿ ಈ ತೂಕವನ್ನು ಕಡಿಮೆ ಮಾಡಲು ವಿನೇಶ್ ಇಡೀ ರಾತ್ರಿ ನಿದ್ರೆ ಮಾಡದೆ ಶ್ರಮಿಸಿದ್ದಾರೆ. ವರದಿ ಪ್ರಕಾರ, ಸೆಮಿ-ಫೈನಲ್ ಪಂದ್ಯವನ್ನು ಗೆದ್ದಾಗ ವಿನೇಶ್ ಅವರ ತೂಕ 52 ಕೆಜಿ ಇತ್ತು. ನಂತರ ತನ್ನ ತೂಕವನ್ನು 2 ಕೆಜಿಯಷ್ಟು ಕಡಿಮೆ ಮಾಡಲು ವಿನೇಶ್ ಇಡೀ ರಾತ್ರಿ ಶ್ರಮಿಸಿದ್ದಾರೆ.







