ಕರ್ನಾಟಕದ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು, ಇಂದು (ನವೆಂಬರ್ 23) ಮತದಾನ ಆರಂಭವಾಗಿದೆ. ಇನ್ನು ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಶಿಗ್ಗಾಂವಿಯಲ್ಲಿ 5ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಯಿ 1,835 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪಠಾಣ್ ಅವರು ಹಿನ್ನಡೆಯಲ್ಲಿದ್ದಾರೆ.
ಶಿಗ್ಗಾಂವಿಯಲ್ಲಿ ನಾಲ್ಕನೇ ಸುತ್ತಿನಲ್ಲೂ ಕೂಡ ಭರತ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ಗಿಂತ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ 1,219 ಮತಗಳಿಂದ ಮುನ್ನಡೆ ಸಾಧಿಸಿದ್ದರು.
ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ 1,001 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. 20,128 ಮತಗಳು ಬಂದಿವೆ. ಸಂಡೂರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತುಗೆ 19,127 ಮತಗಳು ಬಂದಿವೆ.
ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಚನ್ನಪಟ್ಟಣದಲ್ಲಿ ಜಿದ್ದಾಜಿದ್ದಿನ ಫೈಟ್ ನಡೆಯುತ್ತಿದೆ. ಸಿ.ಪಿ. ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ನಡುವೆ ಹಾವು ಏಣಿ ಆಟ ನಡೆಯುತ್ತಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದ್ದೆ. ಮೊದಲ ಒಂದು ಸುತ್ತಿನಲ್ಲಿ ನಿಖಿಲ್ ಮುಂದಿದ್ದರೆ, ಇನ್ನೊಂದು ಸುತ್ತಿನಲ್ಲಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದರು. ಚುನಾವಣೆಯಲ್ಲಿ ಇದು ಸಿ.ಪಿ. ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ನಡುವಿನ ಫೈಟ್ ಆದರೆ, ಇದು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಡುವಿನ ಪೈಪೋಟಿ ಎಂದು ಹೇಳಲಾಗುತ್ತಿದೆ.