Ad image

ಸಾಕಿದ ಅಥವಾ ಬೀದಿ ನಾಯಿ ಕಚ್ಚದರೆ, ಉಗುರಿನಿಂದ ಪರಚಿದರೆ ನಿರ್ಲಕ್ಷ್ಯ ವಹಿಸದೇ ರೇಬೀಸ್ ನಿರೋಧಕ ಚುಚ್ಚುಮದ್ದು ಪಡೆಯಿರಿ: ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ

Vijayanagara Vani
ಸಾಕಿದ ಅಥವಾ ಬೀದಿ ನಾಯಿ ಕಚ್ಚದರೆ, ಉಗುರಿನಿಂದ ಪರಚಿದರೆ ನಿರ್ಲಕ್ಷ್ಯ ವಹಿಸದೇ ರೇಬೀಸ್ ನಿರೋಧಕ ಚುಚ್ಚುಮದ್ದು ಪಡೆಯಿರಿ: ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ

ಬಳ್ಳಾರಿ,ಅ.25

- Advertisement -
Ad imageAd image

ಸಾಮಾನ್ಯವಾಗಿ ಸಾಕಿದ ನಾಯಿಗಳು ಕಚ್ಚಿದರೆ, ಉಗುರಿನಿಂದ ಪರಚಿದರೆ ಅಥವಾ ನಮ್ಮ ಮೈ ಮೇಲಿರುವ ಈಗಾಗಲೆ ಇರುವ ಗಾಯವನ್ಮು ನಾಲಿಗೆಯಿಂದ ನೆಕ್ಕಿದರೆ ಏನೂ ಆಗುವುದಿಲ್ಲವೆಂದು ನಿರ್ಲಕ್ಷ್ವ. ವಹಿಸದೇ ಸೋಪು ಮತ್ತು ನೀರಿನಿಂದ ತೊಳೆದು ಹತ್ತಿರದ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆಯಂತೆ ರೇಬಿಸ್ ನಿರೋಧಕ ಚುಚ್ಚುಮದ್ದು ಪಡೆಯಬೇಕು ಎಂದು ಜಿಲ್ಲಾ ಸರ್ವೇಕ್ಷಣಧಿಕಾರಿ ಹಾಗೂ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ ನೋಡಲ್ ಅಧಿಕಾರಿ ಡಾ.ಮರಿಯಂಬಿ.ವಿ.ಕೆ ಹೇಳಿದರು.
ನಗರದ ಮುಂಡ್ರಿಗಿ ಬಡಾವಣೆಯಲ್ಲಿ ನಾಯಿ ಕಡಿತ ಕುರಿತು ಸಾರ್ವಜನಿಕರಿಗೆ ಜಾಗೃತಿಯನ್ನು ನೀಡುತ್ತಾ ಮಾತನಾಡಿ, ಸೋಂಕುವುಳ್ಳ ನಾಯಿ ಕಡಿತದಿಂದ ಮಾರಣಾಂತಿಕ ರೇಬೀಸ್ ಕಾಯಿಲೆಯನ್ನು ಹರಡುವುದನ್ನು ತಡೆಗಟ್ಟಬಹುದಾಗಿದ್ದು, ವೈದ್ಯರ ಸಲಹೆಯಂತೆ ರೇಬಿಸ್ ಚುಚ್ಚುಮದ್ದನ್ನು ಮೊದಲ ದಿನ, 3ನೇ ದಿನ, 7ನೇ ದಿನ, 14ನೇ ದಿನ, 28 ದಿನ ತಪ್ಪದೇ ಲಸಿಕೆ ಪಡೆಯಬೇಕು ಎಂದು ವಿನಂತಿಸಿದರು.
ಈ ವೇಳೆ ಗುಗ್ಗರಹಟ್ಟಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶೇಗುಫ್ತಾ ಷಾಹೀನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಎಪಡಮಲಾಜಿಸ್ಟ್ ಡಾ.ನಿವೇದಿತಾ, ಮೈಕ್ರೋಬಯಾಲಜಿಸ್ಟ್ ಶರತ್‌ಕುಮಾರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ ಉಪ್ಪಾರ ಸೇರಿದಂತೆ ಪ್ರಯೋಗಾಲಯ ತಂತ್ರಜ್ಞರು, ಸಿಬ್ಬಂದಿಯವರು ಆಶಾ ಕಾರ್ಯಕರ್ತೆಯರು ಸಾರ್ವಜನಿಕರು ಉಪಸ್ಥಿತರಿದ್ದರು.

Share This Article
error: Content is protected !!
";