Ad image

ಪ್ರವಾಸಿಗರಿಗೆ ಪ್ರಮುಖ ಸೂಚನೆಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ…..

Vijayanagara Vani
ಪ್ರವಾಸಿಗರಿಗೆ ಪ್ರಮುಖ ಸೂಚನೆಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ…..

ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ, ಗುಡುಗು ಮಿಂಚು ಶುರುವಾಗಿದೆ. ಅತ್ಯಂತ ಕಿರಿದಾದ ಈ ಪ್ರವಾಸಿ ತಾಣದಲ್ಲಿ ಚಾರಣಕ್ಕೆ ಹೋಗುವುದು ಅಪಾಯ. ಅದಾಗ್ಯೂ ಜನ ಈ ಪ್ರದೇಶದಲ್ಲಿ ಚಾರಕ್ಕೆ ಹೋಗುತ್ತಿರುವುದು ಕಂಡು ಬಂದಿದೆ. ಇದರಿಂದ ಏನಾದರೂ ಅನಾಹುತಗಳು ಸಂಭವಿಸದರೆ ಎಂಬ ಮುನ್ನೆಚ್ಚರಿಕೆಯಿಂದ ಚಾರಣ ಹೋಗುವ ವರ್ಗದಲ್ಲಿ ಪ್ರವಾಸಿಗರ ಸುರಕ್ಷತಾ ಕಾಮಗಾರಿಗೆ ಇಲಾಖೆ ಮುಂದಾಗಿದೆ.

- Advertisement -
Ad imageAd image

ಕಾಮಗಾರಿ ಅನುಷ್ಠಾನಗೊಳ್ಳಲಿರುವ ಕಾರಣ ಎತ್ತಿನ ಭುಜಕ್ಕೆ ಮುಂದಿನ ಆದೇಶದವರೆಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಚಿಕ್ಕಮಗಳೂರು ಇವರ ಆದೇಶದಂತೆ ಮೂಡಿಗೆರೆ ವಲಯ ಅರಣ್ಯ ಇಲಾಖೆ ಅಧಿಕಾರಿಗಳ ಕಚೇರಿಯಿಂದ ಚಾರಣ ನಿಷೇಧ ಆದೇಶ ಹೊರಡಿಸಲಾಗಿದೆ. ಮೂಡಿಗೆರೆ ವಯಲ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಅತಿಯಾಗಿ ಮಳೆಯಾಗುತ್ತಿರುವುದರಿಂದ, ಅಲ್ಲಲ್ಲಿ ಗುಡ್ಡಕುಸಿತ ಸಂಭವಿಸುತ್ತಿರುವುದರಿಂದ, ರಸ್ತೆಬದಿಯ ವಿದ್ಯುತ್ ಕಂಬಗಳು, ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿರುವುದರಿಂದ, ಹಾಗೆಯೇ ಫೋಟೋ ತೆಗೆಯುವ ಸಂದರ್ಭದಲ್ಲಿ ತುರ್ತಾಗಿ ಘಟನಾ ಸ್ಥಳಕ್ಕೆ ತೆರಳಲು ಕಷ್ಟಸಾಧ್ಯವಾಗಿರುತ್ತದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ಯಾವುದೇ ರೀತಿಯ ಪ್ರಾಣಹಾನಿ ಮತ್ತು ಅಪಾಯ ಉಂಟಾಗದಂತೆ ತಡೆಗಟ್ಟುವ ಹಿತದೃಷ್ಟಿಯಿಂದ ಎತ್ತಿನ ಭಜಕ್ಕೆ ಚಾರಣ ಹೋಗುವುದನ್ನು ಮುಂದಿನ ಆದೇಶದವರೆಗೂ ತಡೆಹಿಡಿಯಲಾಗಿದೆ ಎಂದು ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಎತ್ತಿನ ಭುಜವು ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ಪಶ್ಚಿಮ ಘಟ್ಟಗಳ ಪರ್ವತದ ಶಿಖರವಾಗಿದೆ. ಇದು 4,265 ಅಡಿ ಎತ್ತರವನ್ನು ಹೊಂದಿದೆ. ಇದು ಕರ್ನಾಟಕದ ಜನಪ್ರಿಯವಾದ ಚಾರಣ ಸ್ಥಳವಾಗಿದೆ. ಏಕೆಂದರೆ ಕೊನೆಯ ಎರಡು ಕೊಲೋಮೀಟರ್‌ಗಳನ್ನು ಪ್ರವಾಸಿಗರು ಟ್ರಕ್ಕಿಂಗ್ ಮೂಲಕ ಶಿಖರದ ಸಮೀಪವಿರುವ ಬಿಂದುವನ್ನು ತಲುಪಬಹುದಾಗಿದೆ. ಎತ್ತಿನ ಭುಜದ ಸೌಂದರ್ಯಕ್ಕೆ ಮಾರುಹೋಗದರಿಲ್ಲ ಎನ್ನುವಷ್ಟರ ಮಟ್ಟಿಗೆ ಎತ್ತಿನ ಭಜವು ಪಾಕೃತಿಕ ಸೌಂದರ್ಯವನ್ನು ಹೊಂದಿದೆ.
ಮುಂಗಾರು ಸಮಯದಲ್ಲಿ ಚಿಕ್ಕಮಗಳೂರಿನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ಕರ್ನಾಟಕದ ಮೂಲೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಪ್ರಾಕೃತಿಕ ಸೌಂದರ್ಯದಿಂದ ಸಮೃದ್ಧಿವಾಗಿರುವ ಕಾಫಿನಾಡಿನ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದು ದಿನದಿಂದ ದಿನಕ್ಕೆ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಕಳೆದ ಶನಿವಾರದಿಂದ ಸೋಮವಾರದವರೆಗೆ ಮೂರು ದಿನದಲ್ಲಿ 20,000ಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ. ಈಗಾಗಲೇ ಕಳೆದ ಕೆಲ ತಿಂಗಳ ಹಿಂದೆ ಅರಣ್ಯ ಸಚಿವ ಈಶ್ವರ ಖಂಡ್ರೆ ರಾಜ್ಯದ ಪ್ರವಾಸಿ ತಾಣಗಳಿಗೆ ಆನ್ಲೈನ್ ಟಿಕೆಟ್ ಮೂಲಕ ದಿನಕ್ಕೆ ನಿರ್ದಿಷ್ಟ ಪ್ರವಾಸಿಗರಿಗೆ ಮಾತ್ರ ಅವಕಾಶ ಕಲ್ಪಿಸಬೇಕೆಂದು ಸೂಚನೆ ನೀಡಿದ್ದರು. ಆದರೆ, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಹಿಗ್ಗಿಲ್ಲದೆ ಭೇಟಿ ನೀಡುತ್ತಿದ್ದಾರೆ. ಸಾಲದ್ದಕ್ಕೆ, ಎತ್ತಿನ ಭುಜದ ಕಿರಿದಾದ ಪ್ರದೇಶದಲ್ಲೂ ಕೂಡ ಪ್ರವಾಸಿಗರು ಟ್ರಕ್ಕಿಂಗ್ ಹೋಗುತ್ತಿದ್ದಾರೆ.

Share This Article
error: Content is protected !!
";