ಧಾರವಾಡ ಜು.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪೊಲೀಸ್ ಆಯುಕ್ತಾಲಯ, ಜಿಲ್ಲಾ ಪೊಲೀಸ್ ಇಲಾಖೆ, ಡಿಮ್ಹಾನ್ಸ್ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನಮುಕ್ತ ದಿನಾಚರಣೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಆಗಸ್ಟ್ 01 ರಂದು ಬೆಳಿಗ್ಗೆ 10:30 ಗಂಟೆಗೆ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆಯ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಧಾರವಾಡ ಮುರುಘಾಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸುವರು.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.
ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕರು ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕರು ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ.ಎನ್.ಗಣೇಶ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್ಪೀರ್ ಎಸ್.ಖಾದ್ರಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.
ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಭಾಗವಹಿಸುವರು.
ಮಾನಸಿಕ ಆರೋಗ್ಯ ವರ್ಧನೆ ಮತ್ತು ವ್ಯಸನ ಮುಕ್ತತೆಯ ಉಪಾಯಗಳು ಎಂಬ ವಿಷಯದ ಕುರಿತು ಧಾರವಾಡ ಡಿಮ್ಹಾನ್ಸ್ ಮನೋವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಹೇಶ ಎಂ. ಅವರು ಹಾಗೂ ಇಲ್ಲಕಲ್ಲ ಡಾ. ಮಹಾಂತ ಅಪ್ಪಗಳು ಕೈಗೊಂಡ ವ್ಯಸನ ಮುಕ್ತ ಆಂದೋಲನ ಎಂಬ ವಿಷಯ ಕುರಿತು ಧಾರವಾಡ ಗುರುಬಸವ ಮಹಾಂತ ಟ್ರಸ್ಟ್ನ ಅಧ್ಯಕ್ಷ ಡಾ. ರಮೇಶ ತುಂಬರಗುದ್ದಿ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ನೀಡುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೆÇಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ, ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ (ಡಿಮ್ಹಾನ್ಸ್) ನಿರ್ದೇಶಕ ಡಾ. ಅರುಣಕುಮಾರ ಸಿ., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭ ಪಿ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಭಾಗವಹಿಸುವರೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ (ಪ್ರಭಾರ) ಡಾ. ಸುರೇಶ ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.