ಕುಡಿಯುವ ನೀರು, ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕುರಿತು ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ರೈತರ ಬೇಡಿಕೆಗೆ ಅನುಗುಣವಾಗಿ ಬೀತ್ತನೆ ಬೀಜ ವಿತರಿಸಿ; ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

Vijayanagara Vani
ಕುಡಿಯುವ ನೀರು, ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕುರಿತು ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ರೈತರ ಬೇಡಿಕೆಗೆ ಅನುಗುಣವಾಗಿ ಬೀತ್ತನೆ ಬೀಜ ವಿತರಿಸಿ; ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

ರಾಯಚೂರು,ಜೂ.21ಜಿಲ್ಲೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ಬೀತ್ತನೆ ಬೀಜ ಹಾಗೂ ರಸಗೊಬ್ಬರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಜೂ.21ರ ಶುಕ್ರವಾರ ದಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕುಡಿಯುವ ನೀರು, ಅತಿವೃಷ್ಠಿ, ಬೀಜ ಮತ್ತು ರಸಗೊಬ್ಬರ ದಾಸ್ತಾನು ಬೇಡಿಕೆ ಪೂರೈಕೆ ಕುರಿತು ಹಮ್ಮಿಕೊಳ್ಳಲಾಗಿದ್ದ, ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ರೈತರಿಗೆ ಅವಶ್ಯವಿರುವ ಬಿತ್ತನೆ ಬೀಜ, ರಸಗೊಬ್ಬರಗಳನ್ನು ರೈತರ ಬೇಡಿಕೆಯನ್ವಯ ನಿಯಮಿತವಾಗಿ ಪೂರೈಸಬೇಕು. ಇದಕ್ಕಾಗಿ ಪ್ರತಿ ತಾಲ್ಲೂಕಿಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಭೇಟಿ ನೀಡಿ ಪರಿಶೀಲಿಸಬೇಕು. ಕಳಪೆ ಬೀಜ ಮತ್ತು ರಸಗೊಬ್ಬರ ಪೂರೈಕೆ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ವಿವಿಧ ರಸಗೊಬ್ಬರ ಬೇಡಿಕೆ ಹಿನ್ನಲೆಯಲ್ಲಿ ಯೂರಿಯಾ 35022 ಬೇಡಿಕೆಯಿದ್ದು, 49421.17 ದಾಸ್ತಾನು. ಡಿಎಪಿ 22344 ಬೇಡಿಕೆಯಿದ್ದು, 16510.90 ದಾಸ್ತಾನು. ಎಮ್‌ಒಪಿ 2050 ಬೇಡಿಕೆಯಿದ್ದು, 1488.85 ದಾಸ್ತಾನು. ಎನ್‌ಪಿಕೆ 51919 ಬೇಡಿಕೆಯಿದ್ದು, 46586.20 ದಾಸ್ತಾನು. ಎಸ್‌ಎಸ್‌ಪಿ 1765 ಬೇಡಿಕೆಯಿದ್ದು, 770.20 ದಾಸ್ತಾನು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 113100 ಬೇಡಿಕೆಯಿದ್ದು, 114777.32ರಷ್ಟು ದಾಸ್ತನು ರಷ್ಟು ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ತು0ಗಭದ್ರ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ರೈತರಿಗೆ ನೀರು ತಲುಪದೇ ಬೆಳೆಯಾನಿಗಿದೆ. ಪಹಣಿಯಲ್ಲಿ ನೀರಾವರಿ ಪ್ರದೇಶ ಎಂದು ನಮೂದಿಸಿರುವುದರಿಂದ ಪರಿಹಾರದಿಂದ ವಂಚನೆಗೊAಡಿರುವ ಕುರಿತು ಶಾಸಕ ಶಿವರಾಜ್ ಪಾಟೀಲ್ ಅವರು ಜಿಲ್ಲಾ ಉಸ್ತು ಉಸ್ತುವಾರಿ ಸಚಿವರ ಗಮನಕ್ಕೆ ತಂದರು. ಕೂಡಲೇ ಬೆಳೆ ನಷ್ಟ ಪರಿಹಾರ ವಿತರಣೆಯಲ್ಲಿ ನೀರು ಬಾರದೆ ಇರುವ ಅಚ್ಚುಕಟ್ಟು ಪ್ರದೇಶದ ರೈತರ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
2024ನೇ ಸಾಲಿನ ಬಾರಿ ಮಳೆ ಅಥವಾ ಪ್ರವಾಹ, ಸಿಡಿಲು ಬಡಿತದಿಂದ ಜಿಲ್ಲೆಯ ಒಂದು ಪ್ರಕರಣೆ ದಾಖಲಾಗಿದ್ದು, 5ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ. ಜಾನುವಾರು ಜೀವ ಹಾನಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 5 ಪ್ರಕರಣ ದಾಖಲಾಗಿವೆ. ಒಟ್ಟು 1,01,500ರೂ.ಗಳ ಪರಿಹಾರ ನೀಡಲಾಗಿದ್ದು, ಇನ್ನೂ ಜಿಲ್ಲೆಯಲ್ಲಿ ಯಾವುದಾದರು ಇದೇ ತರ ಪ್ರಕರಣಗಳು ಇದ್ದಲ್ಲಿ ಕೂಡಲೇ ಪರಿಹಾರ ಧನ ವಿತರಿಸಬೇಕು. ಪರಿಹಾರ ಧನ ವಿತರಣೆಯಲ್ಲಿ ವಿಳಂಬ ನೀತಿ ಯಾವುದೇ ಕಾರಣಕ್ಕೂ ಅನುಸರಿಸಬಾರದೆಂದು ಹೇಳಿದರು.

ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಿಂದ ಒಟ್ಟು 224 ಬೋರ್‌ವೆಲ್ ಬಾಡಿಗೆಗೆ ಪಡೆದ್ದು, ಸುಮಾರು 141 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ. ನಗರ ಪ್ರದೇಶದ ಒಟ್ಟು 1176 ಬೋರ್‌ವೆಲ್‌ಗಳಿದ್ದು, ಅದರ ಪೈಕಿ 1052 ಕಾರ್ಯನಿರ್ವಹಿಸುತ್ತಿವೆ. ಇನ್ನೂ 118 ಬೋರ್‌ವೆಲ್‌ಗಳು ನಿರುಪಯಕ್ತವಾಗಿದ್ದು, ಕೂಡಲೇ ದುರಸ್ಥಿ ಕಾರ್ಯಕೈಗೊಂಡು ಯಾವುದೇ ಸಮಸ್ಯೆಯಾಗದಂತೆ ನೀರು ಸರಬರಾಜು ಮಾಡಲು ಕ್ರಮವಹಿಸುವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಚಿವರಿಂದ ಜಾಕ್ವಲ್‌ಗೆ ಭೇಟಿ, ಪರಿಶೀಲನೆ:
ಜಿಲ್ಲೆಯ ದೇವದುರ್ಗ ತಾಲೂಕಿನ ಕೃಷ್ಣ ನದಿ ಅಪ್ರಹಾಳ ಗ್ರಾಮದಲ್ಲಿ ನಿರ್ಮಾಣ ಮಾಡಲಾದ ಗಣೆಕಲ್ ಸಮತೋಲನ ಜಲಾಶಯಕ್ಕೆ ನೀರು ಪೂರೈಸುವ ಯೋಜನೆ ಜಾಕ್ವಲ್ ಕಮ್ ಪಂಪ ಹೌಸ್‌ಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆ ಮಾಡಿ, ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜಾಕ್ವಲ್ ಕಮ್ ಪಂಪ ಹೌಸ್ ಕುರಿತು ಮಾಹಿತಿ ಪಡೆದರು.

ಈ ವೇಳೆ ಮಾತನಾಡಿ, ಕಾಮಗಾರಿಯು ಅಚ್ಚುಟ್ಟಾಗಿದ್ದು, ಅಧಿಕಾರಿಗಳು ಮುತ್ತುವರ್ಜಿ ವಹಿಸಿ, ನಿರ್ವಹಣೆ ಮಾಡಬೇಕೆಂದು ಸ್ಥಳದಲ್ಲಿದ ಅಧಿಕಾರಿಗಳಿಗೆ ಸೂಚಿಸಿ, ದಿನ ಎಷ್ಟು ಗಂಟೆಗಳ ಕಾಲ ನೀರು ಕೆರೆಗೆ ಸರಬರಾಜು ಕಾರ್ಯ ಮಾಡಲಾಗುತ್ತದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯಗ ಮಂಡಳಿಯ ಅಧ್ಯಕ್ಷರು ಹಾಗೂ ಸಿಂಧನೂರು ಕ್ಷೇತ್ರದ ಶಾಸಕ ಪಂನಗೌಡ ಬಾದರ್ಲಿ, ಸಂಸದ ಜಿ.ಕುಮಾರ ನಾಯಕ, ಮಾನವಿ ಶಾಸಕ ಜಿ.ಹಂಪಯ್ಯ ನಾಯಕ, ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ್, ಎಪಿಎಮ್‌ಸಿ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ನಗಾರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಪ್ರಭಾರಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ನಿಖಿಲ್ ಬಿ. ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ಸಹಾಯಕ ಆಯುಕ್ತರಾದ ಅವಿನಾಶ್ ಶಿಂಧೆ, ಮೈಬೂಬಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಪೂರೆ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಂದ್ರ ಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್. ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

WhatsApp Group Join Now
Telegram Group Join Now
Share This Article
error: Content is protected !!