ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನದ ವಿರುದ್ಧ 47 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 182 ರನ್‌ಗಳ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ 134 ರನ್‌ಗಳಿಗೆ ಆಲೌಟ್ ಆದರು.
ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನದ ವಿರುದ್ಧ 47 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 182 ರನ್‌ಗಳ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ 134 ರನ್‌ಗಳಿಗೆ ಆಲೌಟ್ ಆದರು.
ಈ ಸವಾಲಿನ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ ಭಾರತದ ಬಿಗಿ ಬೌಲಿಂಗ್ ದಾಳಿ ಎದುರು ರನ್ ಗಳಿಸಲು ಪರದಾಡಿತು. ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ಎದುರು ಅಫ್ಘಾನಿಸ್ತಾನ ಮಂಡಿಯೂರಿತು. ಬುಮ್ರಾ 4 ಓವರ್ ಗಳಲ್ಲಿ ಕೇವಲ 7 ರನ್ ನೀಡಿ 3 ವಿಕೆಟ್ ಪಡೆದರು. ಅರ್ಷದೀಪ್ ಸಿಂಗ್ ಕುಡ 3 ವಿಕೆಟ್ ಪಡೆದರೆ, ಕುಲದೀಪ್ ಯಾದವ್ 2 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು. ಅಂತಿಮವಾಗಿ ಅಫ್ಘಾನಿಸ್ತಾನ 20 ಓವರ್ ಗಳಲ್ಲಿ 134 ರನ್‌ಗಳಿಗೆ ಆಲೌಟ್ ಆಯಿತು. ಸೂರ್ಯಕುಮಾರ್ ಆಸರೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲೇ ರೋಹಿತ್ ಶರ್ಮಾ (8 ರನ್) ಅವರ ವಿಕೆಟ್ ಕಳೆದುಕೊಂಡಿತು. ರಿಷಬ್ ಪಂತ್ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ 43 ರನ್ ಗಳಿಸುವ ಮೂಲಕ ಆಸರೆಯಾದರು
ಪಂತ್ 20 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 24 ರನ್ ಗಳಿಸಿದರು. ಶಿವಂ ದುಬೆ ಕೂಡ 10 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ ಅಫ್ಘಾನಿಸ್ತಾನ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದರು. 28 ಎಸೆತಗಳಲ್ಲಿ 53 ರನ್ ಗಳಿಸಿ ಭಾರತ ಸವಾಲಿನ ಮೊತ್ತ ಕಲೆಹಾಕಲು ಕಾರಣವಾದರು. ಹಾರ್ದಿಕ್ ಪಾಂಡ್ಯ 32 ರನ್ ಗಳಿಸಿದರು. ಜಡೇಜಾ 7 ರನ್, ಅಕ್ಷರ್ ಪಟೇಲ್ 12 ರನ್ ಗಳಿಸಿದರು. ಈ ಗೆಲುವಿನೊಂದಿಗೆ ಭಾರತ ಸೂಪರ್ 8ರ ಮೊದಲ ಗುಂಪಿನ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಭಾರತ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಜೂನ್ 22ರಂದು ಈ ಪಂದ್ಯ ನಡೆಯಲಿದೆ.