ಟಿ.ಬಿ. ಡ್ಯಾಮ್‌ಗೆ ಉಪ ಮುಖ್ಯಮಂತ್ರಿಗಳ ಭೇಟಿ: ಪರಿಶೀಲನೆ

Vijayanagara Vani
ಟಿ.ಬಿ. ಡ್ಯಾಮ್‌ಗೆ ಉಪ ಮುಖ್ಯಮಂತ್ರಿಗಳ ಭೇಟಿ: ಪರಿಶೀಲನೆ
ಹೊಸಪೇಟೆ ವಿಜಯನಗರ ಜಿಲ್ಲೆ ಆಗಸ್ಟ್ 11 ತುಂಗಭದ್ರಾ ಆಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದಿರುವ ಘಟನೆ ಕುರಿತು ಮಾಹಿತಿ ಪಡೆಯಲು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಆಗಸ್ಟ್ 11ರಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದರು.
ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಂಸದರಾದ ಈ. ತುಕಾರಾಮ, ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಆರ್.ಗವಿಯಪ್ಪ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಘವೇಂದ್ರ ಹಿಟ್ನಾಳ ಸೇರಿದಂತೆ ಇನ್ನೀತರ ಜನಪ್ರತಿನಿಧಿಗಳೊಂದಿಗೆ ಉಪ ಮುಖ್ಯಮಂತ್ರಿಗಳು ಜಲಾಶಯಕ್ಕೆ ಆಗಮಿಸಿ, ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಘಟನೆಯ ಬಗ್ಗೆ ಮಾಹಿತಿ ಪಡೆದರು.
ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿಗಳು, ಆಣೆಕಟ್ಟಿನ 16 ಗೇಟುಗಳನ್ನು ಸಿಡಬ್ಲುö್ಯಸಿ ನಿರ್ವಹಣೆ ಮಾಡುತ್ತದೆ. ಇನ್ನುಳಿದ ಗೇಟಗಳ ನಿರ್ವಹಣೆಯನ್ನು ಕರ್ನಾಟಕ ಸರ್ಕಾರವು ಮಾಡುತ್ತದೆ. ತುಂಗಭದ್ರಾ ಆಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದಿರುವುದರಿಂದ ನೀರು ರಭಸವಾಗಿ ನದಿಗೆ ಹರಿಯುತ್ತಿದೆ. ಆಗಸ್ಟ್ 10ರ ರಾತ್ರಿ ಸಮಯದಿಂದಲೇ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಮಾಹಿತಿ ಪಡೆಯಲಾಗುತ್ತ್ತಿದೆ. ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಉಳಿಸಿಕೊಂಡು ಆಣೆಕಟ್ಟಿನ ಗೇಟನ್ನು ದುರಸ್ತಿ ಮಾಡುಬ ಬಗ್ಗೆ ಚರ್ಚೆ ನಡೆಸಲಾಗುತ್ತ್ತಿದೆ ಎಂದು ತಿಳಿಸಿದರು.
ಆಣೆಕಟ್ಟಿನ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಗೇಟಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತದೆ. ರೈತರ ಬಗ್ಗೆ ನಮಗೆ ಕಾಳಜಿ ಇದೆ. ರೈತರ ಸಲಹೆಗಳಿಗು ನಾವು ಗೌರವಿಸುತ್ತೇವೆ. ಅಂತಿಮವಾಗಿ ತಜ್ಞರ ವರದಿ ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.
ಈ ವೇಳೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಮಾತನಾಡಿ, ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗಿ ಬಾಗಿನ ಸಮರ್ಪಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ದುರಾದೃಷ್ಟವಶಾತ್ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಆಗಿ ತೊಂದರೆಯಾಗಿದೆ. ತುಂಗಭದ್ರಾ ಜಲಾಶಯದಲ್ಲಿ ಒಟ್ಟು 105 ಟಿಎಂಸಿ ಅಡಿ ನೀರು ಸಂಗ್ರಹವಿತ್ತು. ಹೊಸ ಗೇಟ್ ಅಳವಡಿಸುವುದಕ್ಕೆ ಬಹಳಷ್ಟು ಪ್ರಮಾಣದ ನೀರನ್ನು ನದಿಗೆ ಹರಿಸಬೇಕಾದ ಪರಿಸ್ಥಿತಿ ಎದುರಾಗಿರುವುದು ಬೇಸರ ತಂದಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಕರ್ನಾಟಕ ನೀರಾವರಿ ನಿಗಮದ ಹಿರಿಯ ಅಧಿಕಾರಿಗಳು, ಟಿ.ಬಿ.ಡ್ಯಾಮನ್ ಅಧಿಕಾರಿಗಳು ಇದ್ದರು.
WhatsApp Group Join Now
Telegram Group Join Now
Share This Article
error: Content is protected !!