ಅಂತರಾಷ್ಟ್ರೀಯ ಯುವ ದಿನಾಚರಣೆ ಮತ್ತು ಯುವ ಜನರಿಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ದೇಶದ ಅಭಿವೃದ್ಧಿಗೆ ಯುವ ಜನತೆ ಪಾತ್ರ ಮುಖ್ಯ

Vijayanagara Vani
ಅಂತರಾಷ್ಟ್ರೀಯ ಯುವ ದಿನಾಚರಣೆ ಮತ್ತು ಯುವ ಜನರಿಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ದೇಶದ ಅಭಿವೃದ್ಧಿಗೆ ಯುವ ಜನತೆ ಪಾತ್ರ ಮುಖ್ಯ
ಚಿತ್ರದುರ್ಗ
ಯುವ ಜನತೆಯಲ್ಲಿ ಉತ್ಸಾಹ, ಛಲ ಇರಬೇಕು. ಕುಟುಂಬ, ಸಮಾಜ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಮನೋಭಾವ ಇರಬೇಕು. ರಾಷ್ಟçದ ಸರ್ವಾಂಗೀಣ ಪ್ರಗತಿ ಹಾಗೂ ದೇಶದ ಅಭಿವೃದ್ಧಿಗೆ ಯುವ ಜನತೆ ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.
ನಗರದ ಅಮೃತ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ಗುರುವಾರ ನೆಹರು ಯುವ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಅಮೃತ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಶ್ರೀ ನೀಲಕಂಠಯ್ಯ ಮೆಮೊರಿಯಲ್ ಪದವಿ ಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ “ಅಂತರಾಷ್ಟಿçÃಯ ಯುವ ದಿನಾಚರಣೆ ಮತ್ತು ಯುವ ಜನರಿಗೆ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನತೆ ತಮ್ಮ ಜವಾಬ್ದಾರಿ ಅರಿತು ಜೀವನದಲ್ಲಿ ಗುರಿ ತಲುಪುವ ಕಡೆ ದೃಷ್ಠಿಕೋನ ಹೊಂದಿರಬೇಕು. ಆದರೆ ಇಂದಿನ ಯುವ ಜನತೆ ಇದರಿಂದ ವಿಮುಖರಾಗುತ್ತಿದ್ದಾರೆ. ತಪ್ಪುಗಳನ್ನು ಮಾಡಿ ಕಾನೂನಿನ ಸಂಘರ್ಷಕ್ಕೆ ತುತ್ತಾಗುತ್ತಿದ್ದಾರೆ ಎಂದು ತಿಳಿಸಿದ ಅವರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೋ), ಬಾಲ್ಯವಿವಾಹ ನಿಷೇಧ ಕಾಯ್ದೆ, ಸೈಬರ್ ಕ್ರೆöÊಂ, ಮಾದಕ ವ್ಯಸನಗಳ ದುಷ್ಪಾರಿಣಾಮಗಳ ಕುರಿತಂತೆ ಯುವ ಜನತೆಗೆ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದರು.
ಪ್ರಸ್ತುತ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ನಾವಿದ್ದು, ಡಿಜಿಟಲ್ ಉಪಕರಣಗಳ ಬಳಕೆ ಮಾಡುವ ಮುನ್ನ ಅವುಗಳ ಬಗ್ಗೆ ನಮಗೆ ಹೆಚ್ಚಿನ ಜ್ಞಾನ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನೆಹರು ಯುವಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಎನ್.ಸುಹಾಸ್ ಮಾತನಾಡಿ, ಯಾವುದೇ ದೇಶ ಅಭಿವೃದ್ಧಿಯಾಗಬೇಕಾದರೆ ಅಲ್ಲಿರುವ ನೈಸರ್ಗಿಕ ಸಂಪತ್ತಿನ ಜೊತೆಗೆ ಯುವ ಜನರ ಸಂಪತ್ತು ಬಹಳ ಮುಖ್ಯ ಪಾತ್ರ ವಹಿಸಲಿದೆ. ಯುಜ ಜನರಲ್ಲಿ ಅಗಾಧವಾದ ಶಕ್ತಿ ಇದ್ದು, ಇಂದಿನ ಯುವಕರೇ ಮುಂದಿನ ನಾಯಕರಾಗಿದ್ದು, ಅಭಿವೃದ್ಧಿಯ ಹರಿಕಾರರು ಎಂದೂ ಕರೆಯಲಾಗುತ್ತದೆ ಎಂದರು.
ಯುವ ಜನತೆಯ ಸಮಸ್ಯೆಗೆ ಪರಿಹಾರ, ಯೋಜನೆ ರೂಪಿಸುವುದು ಸೇರಿದಂತೆ ಯುವ ಜನರ ಸಾಧನೆಯನ್ನು ಸಹ ಮೆಚ್ಚುಗೆ ವ್ಯಕ್ತಪಡಿಸಲು ವಿಶ್ವ ಯುವ ದಿನಾಚರಣೆ ಆಚರಿಸಲಾಗುತ್ತದೆ. ಯುವ ದಿನಾಚರಣೆ ಜೊತೆಗೆ ಯುವ ಜನರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಕಾನೂನಿನ ಅರಿವು ಬಹಳ ಮುಖ್ಯ ಪಾತ್ರವಹಿಸಲಿದೆ. ಕಾನೂನು ಅರಿವು ಹೆಚ್ಚಾದಂತೆ ಅಪರಾಧಗಳ ಸಂಖ್ಯೆಯೂ ಸಹ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ದೇವರಾಜು ಅರಸು ವಿದ್ಯಾಸಂಸ್ಥೆಯ ಕಾರ್ಯದರ್ಶಿ ಭರತ್, ಅಮೃತ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ವಜಾಹತ್ ಉಲ್ಲಾ, ಶ್ರೀ ನೀಲಕಂಠಯ್ಯ ಮೆಮೊರಿಯಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಟಿ.ದುರುಗಪ್ಪ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚಿತ್ರದುರ್ಗ ಜಿಲ್ಲಾ ಶಾಖೆಯ ಉಪಸಭಾಪತಿ ಈ.ಅರುಣ್ ಕುಮಾರ್, ಕಾರ್ಯದರ್ಶಿ ಎನ್.ಮಜಹರ್ ಉಲ್ಲಾ ಇದ್ದರು.
WhatsApp Group Join Now
Telegram Group Join Now
Share This Article
error: Content is protected !!