Ad image

ಹಳಿಯಾಳ ಆರ್‌ಸೆಟಿ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ ಆಹ್ವಾನ

Vijayanagara Vani
ಕೊಪ್ಪಳ ಜುಲೈ 29  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿದ ಉಚಿತವಾಗಿ ಟ್ರಾವೆಲ್ಸ್, ಟೂರಿಸ್ಟ್ ಗೈಡ್ ಮತ್ತು ಉಚಿತ ಕಾರ ಡ್ರೈವಿಂಗ್ ತರಬೇತಿಗಾಗಿ ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿರಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವಯೋಮಾನದ ನಿರುದ್ಯೋಗಿ ಯುವಕ ಯುವತಿರಿಗಾಗಿ ಆಗಸ್ಟ್ 11 ರಿಂದ ಉಚಿತವಾಗಿ ಟ್ರಾವೆಲ್ಸ್, ಟೂರಿಸ್ಟ್ ಗೈಡ್ ತರಬೇತಿಗಾಗಿ ಉಚಿತ ತರಬೇತಿಗಳನ್ನು ನೀಡಲಾಗುತ್ತದೆ. ಯುವಕರಿಗಾಗಿ ಆಗಸ್ಟ್ 23 ರಿಂದ ಉಚಿತ ಕಾರ ಡ್ರೈವಿಂಗ್ ತರಬೇತಿಯನ್ನು ನೀಡಲಾಗುವುದು. ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ತಿಳಿಸಲಾಗಿದೆ. ಆಸಕ್ತರು ವೆಬ್‌ಸೈಟ್ www.rsetihaliyal.org ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ ಮೊ.ಸಂ: 9980510717, 8147408138 ಹಾಗೂ 8284298547ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Share This Article
error: Content is protected !!
";