Ad image

ಬೀದಿನಾಟಕ, ಜಾನಪದ ಸಂಗೀತ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

Vijayanagara Vani
ಬಳ್ಳಾರಿ,ಜು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿದೆ.
ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು.
ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರಿರಬೇಕು. ಈ ಹಿಂದೆ ವಿವಿಧ ಇಲಾಖೆಗಳ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿರುವ ಅನುಭವ ಹೊಂದಿರಬೇಕು. ಬೀದಿನಾಟಕ ತಂಡವು ನೋಂದಾಯಿತ ತಂಡವಾಗಿರಬೇಕು.
ನಿಗದಿತ ಅರ್ಜಿ ನಮೂನೆಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಹಳೆಯ ಕಚೇರಿ ಹಿಂಭಾಗ, ಬಳ್ಳಾರಿ ಇವರಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜುಲೈ 21 ರ ಒಳಗಾಗಿ ಸಲ್ಲಿಸಬೇಕು ಎಂದು ಹಿರಿಯ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";