ಮುಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆಗೆ ಅರ್ಜಿಗಳ ಆಹ್ವಾನ

Vijayanagara Vani
ಮುಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆಗೆ ಅರ್ಜಿಗಳ ಆಹ್ವಾನ
ಧಾರವಾಡ ಆಗಸ್ಟ್.16: ಧಾರವಾಡ ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆ ಧಾರವಾಡ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
2024-25 ನೇ ಸಾಲಿನಲ್ಲಿ ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯ K-kisan Portal ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿರುತ್ತದೆ. Citizen Login ಅಥವಾ RSK Login ಮೂಲಕ ಹತ್ತಿರದ ರೈತಸಂಪರ್ಕಕೇಂದ್ರ, ಸೇವಾಕೇಂದ್ರ, ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ K-kisan Portal ರಡಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ FID (Fruits Identification) ಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಮುಂಗಾರು ಹಂಗಾಮಿಗೆ ಭತ್ತ (ನೀರಾವರಿ), ಭತ್ತ (ಮಳೆ ಆಶ್ರಿತ), ರಾಗಿ (ಮಳೆ ಆಶ್ರಿತ), ಶೇಂಗಾ (ಮಳೆ ಆಶ್ರಿತ), ತೊಗರಿ (ಮಳೆ ಆಶ್ರಿತ), ಸೋಯಾ ಅವರೆ (ಮಳೆ ಆಶ್ರಿತ), ಮುಸುಕಿನ ಜೋಳ (ಮಳೆ ಆಶ್ರಿತ), ನವಣೆ (ಮಳೆ ಆಶ್ರಿತ), ಸಜ್ಜೆ (ಮಳೆ ಆಶ್ರಿತ) ಬೆಳೆ ನಿಗದಿಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.
2024-25 ನೇ ಸಾಲಿನಲ್ಲಿಯೂ ಸಹ ಕೃಷಿಯಲ್ಲಿ ರೈತ ಮಹಿಳೆಯರನ್ನು ಪೆತ್ಸಾಹಿಸುವ ಹಾಗೂ ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪ್ರಶಸ್ತಿಯನ್ನು ನೀಡಲು ಸರ್ಕಾರವು ಅನುಮೋದನೆ ನೀಡಿದ ಪ್ರಯುಕ್ತ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.
ಆಸಕ್ತಿಯುಳ್ಳ ರೈತರು ಆಗಸ್ಟ್ 31, 2024 ರೊಳಗಾಗಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರವೇಶ ಶುಲ್ಕ ಇರುವುದಿಲ್ಲ. ಬೆಳೆ ಕಟಾವು ಮಾಡುವ ವಿಧಾನ, ಸ್ಪರ್ಧಾತ್ಮಕ ಇಳುವರಿಯ ಮಾಹಿತಿ ಇತ್ಯಾದಿಗಳ ಬಗ್ಗೆ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!