Ad image

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Vijayanagara Vani
ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಜೂ.18
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ, ರಾಜ್ಯ ಕಾರ್ಮಿಕ ಕಲ್ಯಾಣ ಸಂಸ್ಥೆ ವತಿಯಿಂದ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗಣಿ ಕಾರ್ಮಿಕರ, ಬೀಡಿ ತಯಾರಿಕೆ ಮತ್ತು ಚಲನಚಿತ್ರ ಕ್ಷೇತ್ರದ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು https://scholarships.gov.in/ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಆಗಸ್ಟ್ 31 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಕೌಲ್‌ಬಜಾರ್ ನ ಬಂಡಿಹಟ್ಟಿ ರಸ್ತೆಯ ಬೆಳಗಲ್ ಕ್ರಾಸ್ ಬಳಿಯ ಎಕ್ಸ್-ಸರ್ವೀಸ್ ಕಾಲೋನಿಯ ನಂ.171 ಐಒಎಂಸಿ ಎಸ್‌ಸಿಎಂ ಕಚೇರಿಗೆ ಸಂಪರ್ಕಿಸಬಹುದು ಎಂದು ಕಾರ್ಮಿಕ ಕಲ್ಯಾಣ ಸಂಸ್ಥೆಯ ವೈದ್ಯಕೀಯ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";