Ad image

ಅಂಚೆ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Vijayanagara Vani


ಬಳ್ಳಾರಿ,ಆ.19
ಅಂಚೆ ಇಲಾಖೆಯಿಂದ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸಲು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಈ ಯೋಜನೆಯಡಿ ಅಂಚೆ ಚೀಟಿಗಳ ಮೌಲ್ಯ, ಸಂಶೋಧನೆಯ ಹವ್ಯಾಸವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ವಿದ್ಯಾರ್ಥಿವೇತನ ನೀಡಲಾಗುವುದು. ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಮತ್ತು ಉತ್ತೇಜನ ಮೂಲಕ ಸದಾಭಿರುಚಿಯ ಆರೋಗ್ಯ ಪೂರ್ಣ ಜ್ಞಾನಧಾರಿತ ಹವ್ಯಾಸ ರೂಢಿಸುವುದು ಮುಖ್ಯ ಉದ್ದೇಶವಾಗಿದೆ.
ಈ ಯೋಜನೆಯ ಲಾಭಪಡೆಯಲು ವಿದ್ಯಾರ್ಥಿಯು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಶೇ.60 ರಷ್ಟು ಅಂಕ ಪಡೆದಿರಬೇಕು. ಅಂಚೆ ಚೀಟಿಗಳ ಠೇವಣಿ ಖಾತೆ ಅಥವಾ ಶಾಲೆಗಳ ಅಂಚೆ ಚೀಟಿ ಕ್ಲಬ್ ನಲ್ಲಿ ಸದಸ್ಯನಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.6,000 ವಿಧ್ಯಾರ್ಥಿ ವೇತನ ನೀಡಲಾಗುವುದು.
ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಮತ್ತು ಯೋಜನೆ ಕಾರ್ಯದ ಆಧಾರದಲ್ಲಿ ಫಲಾನುಭವಿಯನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ಕೊನೆ ದಿನ ಸೆ.05 ಆಗಿದೆ.
ಹೆಚ್ಚಿನ ಮಾಹಿತಿಗಾಗಿ ಆನ್‌ಲೈನ್ ವೆಬ್‌ಸೈಟ್ www.indispost.gov.in ಅಥವಾ www.karnatakspost.gov.in ಮತ್ತು ಆಸಕ್ತ ವಿದ್ಯಾರ್ಥಿಗಳು ಮೊ.9880979730, 9741567829, 08392-266037 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗ ಅಂಚೆ ಅಧೀಕ್ಷಕವರ ಕಚೇರಿಯ ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";