*ಧಾರವಾಡ ಮೇ.29:* ಪ್ರವಾಸಿ ತಾಣಗಳ ಉತ್ತೇಜನ ಮತ್ತು ಪ್ರಚಾರದದೃಷ್ಠಿಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 48 ವರ್ಷದೊಳಗಿನ ಅಭ್ಯರ್ಥಿಗಳಿಗೆ 01 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಾಖಲೆಗಳೊಂದಿಗೆ ಜೂನ್ 14, 2025 ರೊಳಗಾಗಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ:0836-2955522 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.