ಬೆಂಗಳೂರು ನಗರ ಜಿಲ್ಲೆ, ಮಾರ್ಚ್ 28 ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಐ.ಐ.ಎಸ್ ಸಿ (IISc), ಐ.ಐ.ಟಿ (IIT) ಮತ್ತು ಎನ್.ಐ.ಟಿ (NIT) ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ರೂ. 15,000 ಶಿಷ್ಯವೇತನದೊಂದಿಗೆ ತರಬೇತಿಯನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-27 ಅಥವಾ ದೂರವಾಣಿ ಸಂಖ್ಯೆ : 080-2224 0449. 9480843019. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು-64 ಅಥವಾ ದೂರವಾಣಿ ಸಂಖ್ಯೆ: 080-28461351, 9480843051. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯ ರಸ್ತೆ, ಬನಶಂಕರಿ, ಬೆಂಗಳೂರು-70 ಅಥವಾ ದೂರವಾಣಿ ಸಂಖ್ಯೆ: 080-29711096, 9480843050. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು, ಟಿ.ಸಿ ಪಾಳ್ಯ ಮುಖ್ಯ ರಸ್ತೆ, ಬೆಂಗಳೂರು-49 ಅಥವಾ ದೂರವಾಣಿ ಸಂಖ್ಯೆ: 080-29535045, 9480843049. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಆನೇಕಲ್ ತಾಲ್ಲೂಕು, ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ , ಬಸ್ಟಾಂಡ್ ಹಿಂಭಾಗ, ಬೆಂಗಳೂರು-562106 ಅಥವಾ ದೂರವಾಣಿ ಸಂಖ್ಯೆ: 080-27859557, 9480843052 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.